ಕೋಲಾರ:ಗಂಡ ಹೆಂಡತಿಯ ನಡುವಿನ ಜಗಳಕ್ಕೆ ಇಲ್ಲಿ ಎರಡು ವರ್ಷದ ಮಗುವೇ ಬಲಿಯಾಗಿದೆ. ಹೆಂಡತಿ ಮೇಲಿನ ಸಿಟ್ಟಿನಿಂದ ಗಂಡ ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ಕೋಲಾರ ಜಿಲ್ಲೆಯಲ್ಲಿ ಈ ವಿಕೃತ ಘಟನೆ ನಡೆದಿದೆ.
ಇದನ್ನೂ ಓದಿ:ಮೂರನೇ ಮಗುವಾದರೆ 5 ಲಕ್ಷ ರೂ. ಕೊಡ್ತಾರಂತೆ!; ಶಿಕ್ಷಣ-ಚಿಕಿತ್ಸೆಯೂ ಉಚಿತ, ಮದ್ವೆ ಖರ್ಚಿಗೂ ಧನಸಹಾಯ: ಇಲ್ಲಿದೆ ವಿವರ..
ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ಕೆ.ಬಿ.ಕೊತ್ತೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಕೊತ್ತೂರು ಗ್ರಾಮದ 33 ವರ್ಷದ ಗಂಗಾಧರ್ ತನ್ನ 2 ವರ್ಷದ ಮಗಳನ್ನೇ ಕೊಂದಿದ್ದಾನೆ. ಈ ಕುರಿತು ತಾಯಿ ರೇಣುಕಾ ಪೊಲೀಸರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ:ಅತ್ತೆಯನ್ನೇ ಕೊಂದಳಾ ಸೊಸೆ?; ಬೇರೆ ಮನೆ ಮಾಡುವಂತೆ ಗಂಡನಿಗೆ ಕಿರುಕುಳ ಕೊಡುತ್ತಿದ್ದ ಆರೋಪ
ಗಂಗಾಧರ್ ಮತ್ತು ರೇಣುಕಾ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಪದೇಪದೆ ನಡೆಯುತ್ತಿದ್ದ ಜಗಳದಿಂದ ಬೇಸತ್ತಿದ್ದ ಗಂಗಾಧರ್, ಹೆಂಡತಿ ಮೇಲಿನ ಸಿಟ್ಟಿನಿಂದ ಪುತ್ರಿ ರಮ್ಯಳನ್ನು ಕೊಲೆ ಮಾಡಿದ್ದಾನೆ. ನಂಗಲಿ ಪೊಲೀಸ್ ಠಾಣೆಗೆ ರೇಣುಕಾ ದೂರು ನೀಡಿದ್ದು, ಸ್ಥಳಕ್ಕೆ ಕೋಲಾರ ಎಸ್​ಪಿ ನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂಗಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಆಧಾರ್ ಆನ್​ಲೈನ್​​ ಉಚಿತ ಅಪ್​ಡೇಟ್​​ಗೆ ನಾಳೆಯೇ ಕಡೇ ದಿನ: ಇಲ್ಲಿದೆ ಮಾಹಿತಿ..
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:7 + six =
Remember me
