ಬೆಂಗಳೂರು:2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮೊದಲ ಆರೋಪಿ ಕುಮಾರಸ್ವಾಮಿಗೆ ಜಾಮೀನು ನೀಡಲು ಹೈಕೋರ್ಟ್ ಮತ್ತೊಮ್ಮೆ ನಿರಾಕರಿಸಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಪೀಠ, ಅರ್ಜಿದಾರರ ವಿರುದ್ಧ ಗಂಭೀರ ಆರೋಪಗಳಿವೆ. ವಿಚಾರಣೆ ವಿಳಂಬವಾಗುತ್ತಿದೆ ಎಂಬ ಅಂಶ ಪರಿಗಣಿಸಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿತು.
ಇದನ್ನೂ ಓದಿ:ಸಿರಗುಪ್ಪದಲ್ಲಿ ಗ್ರಾಮಸ್ಥರ ಪ್ರತಿಭಟನೆಗೆ ಮಣಿದು ಮದ್ಯದಂಗಡಿ ಮಚ್ಚಿಸಿದ ಅಬಕಾರಿ ಇಲಾಖೆ
ಈಗಾಗಲೇ ಜಾಮೀನು ಪಡೆದಿರುವ ಕೆಲ ಆರೋಪಿಗಳು ವಿಚಾರಣೆಗೆ ಹಾಜರಾಗುತ್ತಿಲ್ಲ, ಮತ್ತೆ ಕೆಲವರು ತಲೆ ಮರೆಸಿಕೊಂಡಿದ್ದಾರೆೆ. ಹೀಗಿರುವಾಗ ಮೊದಲ ಆರೋಪಿಗೆ ಜಾಮೀನು ಮಂಜೂರು ಮಾಡಿದರೆ ಆತ ಸಹ ತಲೆ ಮರೆಸಿಕೊಳ್ಳುವ ಸಾಧ್ಯತೆ ತಳ್ಳಿಹಾಕುವಂತಿಲ್ಲ ಎಂದು ಅರ್ಜಿ ವಜಾಗೊಳಿಸಿದ ಪೀಠ, ಯಾವ ಕಾರಣಕ್ಕೆ ಹೈಕೋರ್ಟ್ ಆದೇಶ ಪಾಲನೆ ಆಗಿಲ್ಲ ಎಂಬುದಕ್ಕೆ ವಿವರಣೆ ಕೇಳಿ ವಿಚಾರಣಾ ನ್ಯಾಯಾಲಯಕ್ಕೆ ಶೋಕಾಸ್ ನೋಟಿಸ್ ಜಾರಿಗೊಳಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿತು.
ವಿದೇಶಕ್ಕೆ ತೆರಳಿದ್ರು ಸೋನಿಯಾ, ರಾಹುಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
