ವಿಜಯನಗರ:ಎಸಿ ಸ್ಫೋಟದಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದಿದೆ.
ವೆಂಕಟ್ ಪ್ರಶಾಂತ್​ (42) ಪತ್ನಿ ಡಿ. ಚಂದ್ರಕಲಾ (38 ) ಹಾಗೂ ಮಕ್ಕಳಾದ ಎಚ್.ಎ. ಅರ್ದ್ವಿಕ್(16) ಮತ್ತು ಪ್ರೇರಣಾ (8) ಮೃತ ದುರ್ದೈವಿಗಳು. ರಾಘವೇಂದ್ರ ಶೆಟ್ಟಿ ಎನ್ನುವವರ ಮನೆಯಲ್ಲಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್​ ಮತ್ತು ಎ.ಸಿ ಸ್ಫೋಟದಿಂದ ಮನೆಗೆ ಬೆಂಕಿ ಹತ್ತಿಕೊಂಡು ದಟ್ಟ ಹೊಗೆ ಆವರಿಸಿದಾಗ ರಾಘವೇಂದ್ರ ಶೆಟ್ಟಿ ಮತ್ತ ಅವರ ಪತ್ನಿ ರಾಜಶ್ರೀ ಅವರು ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಆದರೆ, ವೆಂಕಟ್​ ಪ್ರಶಾಂತ್​ ಮತ್ತು ಅವರ ಪತ್ನಿ ಮತ್ತು ಮಕ್ಕಳು ಹೊರಬರಲಾಗದೇ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬೆಳಗಿನ ಜಾವ ಅವಘಡ ನಡೆದಿದ್ದು, ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಗ್ನಿಶಾಮಕ ದಳ ಸಂಪೂರ್ಣ ಬೆಂಕಿ ನಂದಿಸಿದೆ. ಎಸಿ ಸ್ಫೋಟದಿಂದ ವಿಷ ಅನಿಲ ಸೋರಿಕೆಯೋ ಅಥವಾ ಬೆಂಕಿ ಹತ್ತಿಕೊಂಡ ಹೊಗೆಗೆ ಉಸಿರುಗಟ್ಟಿತೋ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಡೀ ಏರಿಯಾದ ಕರೆಂಟ್ ತೆಗೆದು ಅಗ್ನಿ ಅವಘಡ ಮತ್ತು ಶಾರ್ಟ್ ಸರ್ಕ್ಯೂಟ್​ಗೆ ಕಾರಣ ಹುಡುಕಲಾಗುತ್ತಿದೆ.
ಘಟನೆ ಸಂಬಂಧ ಮರಿಯಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಸುಪ್ರೀಂಕೋರ್ಟ್​ನಲ್ಲಿ ಪಾಕ್​ ಪ್ರಧಾನಿಗೆ ಭಾರೀ ಮುಖಭಂಗ: ನಾಳೆಯೇ ಇಮ್ರಾನ್​ ಸರ್ಕಾರದ ಭವಿಷ್ಯ ನಿರ್ಧಾರ

ದೇಶದಲ್ಲಿ ಚೀನಾ ವಸ್ತು ಸುಸ್ತು; ಒಂದು ವರ್ಷದ ಅವಧಿಯಲ್ಲಿ ಶೇ.67 ಬೇಡಿಕೆ ಕುಸಿತ

ಪೊಲೀಸ್​ ತಪಾಸಣೆ ವೇಳೆ ಓಡಿ ಹೋಗಲು ಯತ್ನಿಸಿ ರೈಲಿಗೆ ಸಿಲುಕಿ ರೌಡಿಶೀಟರ್ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − six =
Remember me
