ಬೆಂಗಳೂರು:ಸುಂಕದಕಟ್ಟೆಯಲ್ಲಿ ಹಾಡಹಗಲೇ ಯುವತಿಯ ಮೇಲೆ ಆ್ಯಸಿಡ್​ ದಾಳಿ ನಡೆಸಿದ ಪ್ರಕರಣದಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರಿಂದ ಬಂಧನವಾಗಿರುವ ಆರೋಪಿ ನಾಗೇಶ್​ ವಿಚಾರಣೆ ವೇಳೆ ಪೊಲೀಸರ ಮುಂದೆ ಸ್ಫೋಟಕ ಸತ್ಯವನ್ನು ಬಾಯ್ಬಿಟ್ಟಿದ್ದಾನೆ.
ಆರೋಪಿ ನಾಗೇಶ್​ನನ್ನು ಬಂಧಿಸಿದ ಬೆನ್ನಲ್ಲೇ ಆ್ಯಸಿಡ್ ಹಾಕಿದ್ದು ಯಾಕೆ ಎಂದು ಪೊಲೀಸರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ನಾಗ, ನಾನು ಆ್ಯಸಿಡ್ ಹಾಕುವುದಕ್ಕೆ ಯುವತಿಯೇ ಕಾರಣ ಎಂದಿದ್ದಾನೆ.
ನಾನು ಆ್ಯಸಿಡ್ ಹಾಕಬಾರದು ಅಂದುಕೊಂಡಿದ್ದೆ. ಘಟನೆ ಹಿಂದಿನ ದಿನ ಬಾಯಿ ಮಾತಿಗೆ ಆ್ಯಸಿಡ್ ಹಾಕ್ತೀನಿ ಎಂದು ಯುವತಿಗೆ ಹೇಳಿದ್ದೆ. ಆದರೆ, ಯುವತಿ ಅದನ್ನು ಅವರ ತಂದೆಗೆ ಹೇಳಿದಳು. ಬಳಿಕ ಅವರ ತಂದೆ ನನ್ನ ಅಣ್ಣನಿಗೆ ಹೇಳದರು. ನನ್ನ ಅಣ್ಣ ನನಗೆ ಚೆನ್ನಾಗಿ ಬೈದಿದ್ದ. ಇದರಿಂದ ಆ್ಯಸಿಡ್ ಹಾಕಿಯೇ ಬಿಡೋಣ ಎಂದು ನಿರ್ಧರಿಸಿಬಿಟ್ಟೆ ಎಂದು ಆ್ಯಸಿಡ್ ನಾಗ ಹೇಳಿಕೆ ನೀಡಿದ್ದಾನೆ.
ಘಟನೆಯ ಬಳಿಕ ತಮಿಳುನಾಡಿನ ತಿರುವಣ್ಣಾಮಲೈಗೆ ಪರಾರಿಯಾಗಿ ಆಶ್ರಮವೊಂದರಲ್ಲಿ ಸೇರಿಕೊಂಡು ಸ್ವಾಮೀಜಿ ವೇಷ ಹಾಕಿಕೊಂಡಿದ್ದನು. ಘಟನೆ ನಡೆದ 16 ದಿನಗಳ ಬಳಿಕ ಇದೀಗ ನಾಗನನ್ನು ಬಂಧಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಆ್ಯಸಿಡ್ ದಾಳಿ ಪ್ರಕರಣ: ಎಸ್ಕೇಪ್​ ಆಗಲು ಹೈಡ್ರಾಮ ಮಾಡಿದ ಆರೋಪಿ ನಾಗೇಶ್​ ಕಾಲಿಗೆ ಗುಂಡೇಟು

ಆ್ಯಸಿಡ್​ ದಾಳಿಕೋರ ನಾಗನನ್ನು ಬಂಧಿಸಲು ಹೋದಾಗ ಆಶ್ರಮದವರು ಹೇಳಿದ್ದನ್ನು ಕೇಳಿ ಬೆರಗಾಗಿದ್ರು ಪೊಲೀಸರು!

ಕಾಸರಗೋಡಿನ ನಟಿ-ರೂಪದರ್ಶಿ ಸಂಶಯಾಸ್ಪದ ಸಾವು: ಮೃತಳ ಮನೆಯಲ್ಲಿ ಪತ್ತೆಯಾಯ್ತು ಅಪಾಯಕಾರಿ ವಸ್ತು!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 × 5 =
Remember me
