ಬೆಂಗಳೂರು:ಅಧಿಕೃತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು ದೆಹಲಿಗೆ ಹೋಗುತ್ತಿದ್ದೇನೆ. ಆದರೆ ಪಕ್ಷದ ವರಿಷ್ಠರು ಅಥವಾ ಕೇಂದ್ರ ಸಚಿವರನ್ನು ಭೇಟಿ ಮಾಡುವ ಯಾವುದೇ ಇರಾದೆಯಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮೇ 3ರಂದು ಬೆಂಗಳೂರಿಗೆ ಬರುವ ಸಾಧ್ಯತೆಗಳಿದ್ದು, ಅದೇ ದಿನ ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಚರ್ಚಿಸಬೇಕೆಂದಿರುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ದೆಹಲಿಯಲ್ಲಿ ಶನಿವಾರ ಆಯೋಜಿಸಿರುವ ಮುಖ್ಯಮಂತ್ರಿಗಳು ಹಾಗೂ ಮುಖ್ಯ ನ್ಯಾಯಮೂರ್ತಿಗಳ ಸಭೆಯಲ್ಲಿ ಭಾಗವಹಿಸಲು ಇಂದು ರಾತ್ರಿ ದೆಹಲಿಗೆ ಹೊರಟಿರುವೆ.
ಶನಿವಾರದ ಸಮಾವೇಶದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ರಾತ್ರಿ ಏರ್ಪಡಿಸಿರುವ ಔತಣಕೂಟದಲ್ಲಿ ಪಾಲ್ಗೊಳ್ಳುವೆ. ಭಾನುವಾರ ಬೆಳಗ್ಗೆ ವಿಮಾನ ಹತ್ತಿ ಬೆಂಗಳೂರಿಗೆ ಮರಳುತ್ತಿದ್ದು, ದೆಹಲಿಯಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಂಬರುವ ಚುನಾವಣೆ ಹಿತದೃಷ್ಟಿಯಿಂದ ಸಚಿವ ಸಂಪುಟದಲ್ಲಿ ಖಾಲಿಯಿರುವ ಐದು ಸ್ಥಾನಗಳನ್ನು ಭರ್ತಿ ಮಾಡಿ, ಒಂದು ವರ್ಷದಮಟ್ಟಿಗೆ ಕೆಲಸ ಮಾಡಲು ಅವಕಾಶ ನೀಡಬೇಕು ಎಂಬ ಆಕಾಂಕ್ಷೆಗಳು, ಹಲವು ಶಾಸಕರು ಹಾಗೂ ಮುಖಂಡರ ಅಭಿಪ್ರಾಯಗಳನ್ನು ಈಗಾಗಲೇ ವರಿಷ್ಠರ ಗಮನಕ್ಕೆ ತಂದಿರುವೆ ಎಂದು ಸಿಎಂ ಬೊಮ್ಮಾಯಿ‌ ಪ್ರತಿಕ್ರಿಯಿಸಿದರು.
ದಕ್ಷಿಣದ ಸಿನಿಮಾಗಳನ್ನು ನೋಡಿ ಬಾಲಿವುಡ್​ ಹೆದರಿದೆ: ಪಾಠ ಕಲಿಯದಿದ್ರೆ ಕಷ್ಟ ಅಂದ್ರು ಮನೋಜ್​ ಬಾಜ್ಪೇಯಿ

ಬಿಜೆಪಿಗೆ ಬರ್ಬೇಕು ಅಂದ್ರೆ ಈ 3 ಷರತ್ತಿಗೆ ಒಪ್ಪಬೇಕು… ಸುಮಲತಾರ ಡಿಮಾಂಡ್​ಗೆ ಬೆಚ್ಚಿಬಿದ್ದಿದೆಯಂತೆ ಬಿಜೆಪಿ!

ದರ್ಗಾದಲ್ಲಿ ಶಿವನಾಮ ಝೇಂಕಾರ! ಅಮಾವಾಸ್ಯೆ, ಹುಣ್ಣಿಮೆಯಲ್ಲಿ ವಿಶೇಷ ಪೂಜೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 + eight =
Remember me
