ಚಿಕ್ಕಮಗಳೂರು:ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಸಮ್ಮಿಶ್ರ ಸರ್ಕಾರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರ ಪೊತನವಾಗುವುದು ನಿಶ್ಚಿತ ಎಂದು ಮಾಜಿ ಸಚಿವ ಆರ್​.ಅಶೋಕ್​ ಭವಿಷ್ಯ ನುಡಿದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಕುರಿತು ಮಾತನಾಡಿದ ಆರ್.ಅಶೋಕ್​ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​ ಇಬ್ಬರೂ ಸೇರಿ ಸಮ್ಮಿಶ್ರ ಸರ್ಕಾರವನ್ನು ರಚಿಸಿದ್ದಾರೆ. ಇತ್ತೀಚಿಗೆ ಇದೇನು ಸಮ್ಮಿಶ್ರ ಸರ್ಕಾರವೇ ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯನವರೇ ಈ ವಿಚಾರವನ್ನು ಒಪ್ಪಿಕೊಂಡಿದ್ದಾರೆ.
ಮುಖ್ಯಮಂತ್ರಿಗಳಾದವರು ಮಾಜಿ ಸಿಎಂಗಳನ್ನು ಭೇಟಿ ಮಾಡುವುದು ವಾಡಿಕೆ. ಆದರೆ, ಡಿಸಿಎಂ ಡಿಕೆ. ಶಿವಕುಮಾರ್​ ಎಸ್​.ಎಂ.ಕೃಷ್ಣ, ಎಚ್​.ಡಿ.ದೇವೇಗೌಡ, ಬಸವರಾಜ್​ ಬೊಮ್ಮಾಯಿ ಅವರನ್ನು ಭೇಟಿ ಮಾಡುವ ಮೂಲಕ ತಾವೇ ಮುಖ್ಯಮಂತ್ರಿ ಎಂಬಂತೆ ವರ್ತಿಸುತ್ತಿದ್ಧಾರೆ. ಈ ಇಬ್ಬರು ನಾಯಕರ ಜಗಳ ಬೀದಿಗೆ ಬಂದರೆ ಸರ್ಕಾರ ಪತನವಾಗುವುದು ನಿಶ್ಚಿತ ಎಂದು ಹೇಳಿದ್ಧಾರೆ.
ಇದನ್ನೂ ಓದಿ:ನಳಿನ್​ ಕುಮಾರ್​ ಕಟೀಲ್​ರನ್ನು ಕಾಮಿಡಿ ಕಿಲಾಡಿ ಎನ್ನುವುದು ಇದೇ ಕಾರಣಕ್ಕೆ: ಕಾಂಗ್ರೆಸ್​ ಟಾಂಗ್​
ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಸದಯಕ್ಕೆ ಆ ಸ್ಥಾನ ಖಾಲಿ ಇಲ್ಲ. ಸೋಮಣ್ಣ ಅವರ ಹೇಳಿಕೆ ಬಗ್ಗೆ ನನನಗೆ ತಿಳಿದಿಲ್ಲ. ರಾಜ್ಯ ಘಟಕದ ಅಧ್ಯಕ್ಷರಾಗಿ ಕಟೀಲ್​ ಅವರೇ ಮುಂದುವರೆಯಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತಿದ್ದೇವೆ.
ವಿಧಾನಸಭೆ ಅಧಿವೇಶನ ಆರಂಭ್ಕಕೂ ಮುನ್ನ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಲಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಆರ್​.ಅಶೋಕ್​ ತಿಳಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
