ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಹಾಗೂ 185 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬ್ರಹ್ಮಾಂಡ ಭ್ರಷ್ಟಚಾರ ನಡೆದಿರುವುದು ಅತ್ಯಂತ ಸ್ಪಷ್ಟವಾಗಿದ್ದರೂ ಸಚಿವ ಬಿ. ನಾಗೇಂದ್ರ, ನಿಗಮದ ಅಧ್ಯಕ್ಷ ಹಾಗೂ ಭ್ರಷ್ಟ ಅಧಿಕಾರಿಗಳನ್ನು ರಕ್ಷಣೆ ಮಾಡಲು ಹೊರಟಿದೆ ಈ ಲಜ್ಜೆಗೆಟ್ಟ ಕಾಂಗ್ರೆಸ್​ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ ಕಿಡಿಕಾರಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ ಹೆಣ್ಣು ಮಕ್ಕಳು ಕಾಣೆಯಾದುದರ ಹಿಂದಿದೆ ದೊಡ್ಡ ಮಾಫಿಯಾ : ನಾಗಲಕ್ಷ್ಮೀ ಚೌಧರಿ
“ಸಿಎಂ ಸಿದ್ದರಾಮಯ್ಯನವರೇ ಈ ಹಗರಣದಲ್ಲಿ ದಲಿತರ ದುಡ್ಡು ಲೂಟಿಯಾಗಿರುವುದು ಒಂದು ಕಡೆಯಾದರೆ, ಒಬ್ಬ ಅಮಾಯಕ ಹಾಗು ಪ್ರಾಮಾಣಿಕ ಅಧಿಕಾರಿಯ ಬಲಿಯಾಗಿದೆ. ಹತ್ತಾರು ಕಂಪನಿಗಳಿಗೆ ನೂರಾರು ಕೋಟಿ ರೂ. ಮೌಲ್ಯದ ಅಂತರರಾಜ್ಯ ಹಣ ವರ್ಗಾವಣೆ ನಡೆದಿರುವ ಈ ಪ್ರಕರಣದ ನ್ಯಾಯಯುತ ಇತ್ಯರ್ಥಕ್ಕೆ ಸಿಬಿಐ ತನಿಖೆಯೊಂದೇ ಮಾರ್ಗ. ಹಗರಣವಿಷ್ಟು ಗಂಭೀರವಾಗಿದ್ದರೂ ಸಿಐಡಿ ತನಿಖೆ, ಎಸ್​ಐಟಿ ತನಿಖೆ ಅಂತ ಕಾಲಹರಣ ಮಾಡಿ, ಕಡೆಗೆ ಪ್ರಕರಣವನ್ನು ಮುಚ್ಚಿ ಹಾಕುವ ನಿಮ್ಮ ಹುನ್ನಾರವನ್ನು ಅರಿಯದಷ್ಟು ಅಮಾಯಕರಲ್ಲ ಕರ್ನಾಟಕದ ಜನತೆ” ಎಂದಿದ್ದಾರೆ.
“ನಿಮ್ಮ ನಾಟಕವನ್ನು ಸಾಕು ಮಾಡಿ, ಈ ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಿ. ಮೃತ ಅಧಿಕಾರಿಯ ಕುಟುಂಬಕ್ಕೆ, ಪರಿಶಿಷ್ಟ ಪಂಗಡ ಸುದಾಯಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿ. ಭ್ರಷ್ಟ ಸಚಿವರಾದ ನಾಗೇಂದ್ರರನ್ನು ಸಂಪುಟದಿಂದ ಕಿತ್ತೊಗೆದು ನಿಮ್ಮ ಸರ್ಕಾರದ ಮರ್ಯಾದೆ ಉಳಿಸಿಕೊಳ್ಳಿ” ಎಂದು ವ್ಯಂಗ್ಯವಾಡಿದ್ದಾರೆ.
ನನಗಿರುವುದು ಇದೊಂದೇ ಆಸೆ… ‘3’ರ ಹಿಂದೆ ಬಿದ್ದ ಕೆಕೆಆರ್​ ಮೆಂಟರ್ ಗೌತಮ್​ ಗಂಭೀರ್​!

ನೀವೆಂದಿಗೂ ಈ ತಪ್ಪು ಮಾಡೋದಿಲ್ಲ ಅಂದುಕೊಂಡಿದ್ದೀನಿ; ‘ಕ್ಯಾಪ್ಟನ್ ಕೂಲ್’​ಗೆ ಬಹುಮುಖ್ಯ​ ಸಲಹೆ ಕೊಟ್ಟ ಸುನಿಲ್ ಗವಾಸ್ಕರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eleven =
Remember me
