ಬೆಂಗಳೂರು:ಇಂದು ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಭವಿಸಿದ್ದ ನಿಗೂಢ ವಸ್ತು ಸ್ಫೋಟ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಅದು ಬಾಂಬ್​ ಸ್ಫೋಟ ಎಂದು ಡಿಜಿಪಿ ಅಲೋಕ್​ ಮೋಹನ್​ ತಿಳಿಸಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡ ಘಟನೆಗೆ ಪ್ರತಿಕ್ರಿಯಿಸಿದ್ದು, ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಈ ಮಧ್ಯೆ ವಿಪಕ್ಷ ನಾಯಕ ಆರ್​. ಅಶೋಕ ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಈ ಮೂರು ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳ ಒಟ್ಟು ಬಜೆಟ್ ಎಷ್ಟಿದೆ ಗೊತ್ತೇ? ಇಲ್ಲಿದೆ ವರದಿ
“ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಜನ ಸಾಮಾನ್ಯರ ಎದೆ ನಡುಗಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ದಿನೇ ದಿನೇ ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆಗೆ ಮತ್ತೊಂದು ನಿದರ್ಶನವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂಡಿ.ಕೆ. ಶಿವಕುಮಾರ್​ ಪದೇ ಪದೇ ಅನುಸರಿಸುತ್ತಿರುವ ತುಷ್ಟೀಕರಣ, ಓಲೈಕೆ ರಾಜಕಾರಣದ ಫಲವಾಗಿ ಇಂದು ಭಯೋತ್ಪಾದಕರಿಗೆ, ದೇಶದ್ರೋಹಿಗಳಿಗೆ, ಸಮಾಜ ಘಾತುಕ ಶಕ್ತಿಗಳಿಗೆ ರೆಕ್ಕೆ ಪುಕ್ಕ ಬಂದು ಕಾನೂನಿನ ಭಯ ಇಲ್ಲದಂತಾಗಿದ್ದು, ಪೊಲೀಸರ ನೈತಿಕ ಸ್ಥೈರ್ಯಕ್ಕೆ, ಗುಪ್ತಚರ ಇಲಾಖೆಯ ಕಾರ್ಯದಕ್ಷತೆಗೆ ಧಕ್ಕೆ ತಂದಿದೆ” ಎಂದಿದ್ದಾರೆ.
“ಇಂದಿನ ಬಾಂಬ್ ಬ್ಲಾಸ್ಟ್ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ, ತನಿಖೆಯನ್ನ NIAಗೆ ಒಪ್ಪಿಸಬೇಕು. ಕಾಂಗ್ರೆಸ್ ಸರ್ಕಾರ ಇನ್ನು ಮುಂದಾದರೂ ಕರ್ನಾಟಕದ ಜನತೆಗೆ, ಬೆಂಗಳೂರಿಗೆ ಶಾಂತಿ ಸುರಕ್ಷತೆಯ ಗ್ಯಾರೆಂಟಿ ನೀಡುವತ್ತ ಗಮನಹರಿಸಬೇಕು” ಎಂದು ತಮ್ಮ ಎಕ್ಸ್ (ಈ ಹಿಂದಿನ ಟ್ವಿಟರ್) ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.
ಆಧಾರ್ ಲಿಂಕ್ ಆಗಿರುವ ಫೋನ್ ತನ್ನಿ ಅಂದ್ರೆ…..ಈ ಮುಗ್ಧ ಅಜ್ಜ ತಂದಿದ್ದೇನು ಗೊತ್ತೇ? ನಿಜಕ್ಕೂ ಪಾಪ ಅನಿಸುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 2 =
Remember me
