ಬೆಂಗಳೂರು:ರಾಜ್ಯ ಸರ್ಕಾರ ಏಕಾಏಕಿ ಬಿಬಿಎಂಪಿ ಗುತ್ತಿಗಾದಾರರ ಬಿಲ್ ಕೊಡುತ್ತಿಲ್ಲ. ಎರಡು ತಿಂಗಳಿನಿಂದ ಯಾವುದೇ ನಿವೇಶನಗಳಲ್ಲಿ‌ ಮನೆಗಳ ನಿರ್ಮಾಣಕ್ಕೆ ಪ್ಲ್ಯಾನ್ ಮಂಜೂರಾತಿ ಕೊಟ್ಟಿಲ್ಲ. ಇದರ ಗೂಡಾರ್ಥವೇನು? ಎಂದು ಮಾಜಿ ಡಿಸಿಎಂ ಆರ್.‌ಅಶೋಕ್​​​​​​ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಇಂದು ಪದ್ಮನಾಭನಗರದ ಶಾಸಕರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.‌ಅಶೋಕ್​​​​​​, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಕರ್ನಾಟಕವನ್ನು ಎಟಿಎಂ ಮಾಡ್ತಾರೆ ಎಂದು ಅಮಿತ್ ಶಾ ಹೇಳಿದ್ದರು. ಅದು ಈಗ ನಿಜವಾಗಿದೆ. ಈಗ ಅಧಿಕಾರದಲ್ಲಿರುವವರು ಪೇ ಸಿಎಂ- ಡಿಸಿಎಂ?. ಈ ಗುತ್ತಿಗೆದಾರರು ನಿಮ್ಮ ವಿಶ್ವವಿದ್ಯಾಲಯದಲ್ಲಿ ಓದಿ ಪಿಎಚ್​​​​ಡಿ ಮಾಡಿದವರೇ ಎಂದು ಟೀಕಿಸಿದರು.
ಕಳೆದ 2 ತಿಂಗಳಿನಿಂದ ವರ್ಗಾವಣೆ ದಂಧೆ ನಡೆಯುತ್ತಿದೆ. ಗುತ್ತಿಗೆದಾರರು ಮಾಡಿರುವ ಕೆಲಸಗಳಿಗೆ ಶೇ.15 ರಷ್ಟು ಕಮಿಷನ್ ಕೇಳುತ್ತಿರುವುದು ಸರಿಯೇ, ಇದೇನು ಬಿನ್ ಲಾಡೆನ್ ಸರ್ಕಾರನಾ ಎಂದು ಆರ್ ಅಶೋಕ್ ತರಾಟೆಗೆ ತೆಗೆದುಕೊಂಡರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಬೈರತಿ ಬಸವರಾಜು, ಸತೀಶ ರೆಡ್ಡಿ, ಉದಯ ಗರುಡಾಚಾರ, ರಾಮಮೂರ್ತಿ ಸೇರಿದಂತೆ ಅನೇಕರು ಇದ್ದರು.
ಸ್ವಾತಂತ್ರ್ಯ ದಿನಾಚರಣೆ 2023: ದೆಹಲಿಯ ಈ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
