ಬೆಂಗಳೂರು:ನಿನ್ನೆ ಮೆಜೆಸ್ಟಿಕ್​ನಲ್ಲಿ ಕಾಂಗ್ರೆಸ್ ನಾಯಕರು ಸೃಷ್ಟಿ ಮಾಡಿದ್ದ ಅವಾಂತರಕ್ಕೆ ಕಂದಾಯ ಸಚಿವ ಆರ್​. ಅಶೋಕ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾವುದೇ ರಾಜಕಾರಣಗಳು ಇಂತಹ ಸಂದರ್ಭದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು. 150 ವರ್ಷದ ಇತಿಹಾಸ ಇರುವ ಕಾಂಗ್ರೆಸ್​ ಕರೊನಾ ವೈರಸ್​ ಸಂದರ್ಭದಲ್ಲಿ ಇಷ್ಟು ಕೀಳುಮಟ್ಟದ ರಾಜಕಾರಣಕ್ಕೆ ಇಳಿದಿದ್ದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.
ಕಾಂಗ್ರೆಸ್​ ನಾಯಕರು ಉತ್ತರಕುಮಾರನ ಪೌರುಷವನ್ನು ತೋರಿಸುತ್ತಿದ್ದಾರೆ. ಅವರಿಗೆ ನಾಚಿಕೆ ಆಗಬೇಕು. ನಮ್ಮ ಬಳಿ ಕೋಟ್ಯಂತರ ರೂಪಾಯಿ ಇದೆ ಎಂದು ಹೋದಲ್ಲಿ, ಬಂದಲ್ಲಿ ಹೇಳಿಕೊಳ್ತಿದ್ದಾರೆ. ಈ ಮೂಲಕ ನೊಂದ ಜನರಿಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:ಬಿಜೆಪಿ ವಿರುದ್ಧ ತಿರುಗಿಬಿದ್ದ ಕಾಂಗ್ರೆಸ್ ಮಹಿಳಾ ಘಟಕ; ಕಣ್ಣಿಗೆ ಬಟ್ಟೆಕಟ್ಟಿಕೊಂಡು ‘ನಾನು ಗಾಂಧಾರಿ’ ಎಂದ್ರು ಡಿ.ಕೆ.ಶಿವಕುಮಾರ್​
ಇನ್ನು ಡಿ.ಕೆ.ಶಿವಕುಮಾರ್ ಅವರು ಕೂಲಿ ಕಾರ್ಮಿಕರನ್ನು ಉಚಿತವಾಗಿ ಕರೆದುಕೊಂಡು ಹೋಗಿ ಅವರ ಊರಿಗೆ ಬಿಡಲು ಕೆಪಿಸಿಸಿಯಿಂದ ಕೆಎಸ್​ಆರ್​ಟಿಸಿಗೆ 1 ಕೋಟಿ ರೂಪಾಯಿ ಚೆಕ್​ ನೀಡಿದ್ದಾಗಿ ಹೇಳಿಕೊಂಡಿದ್ದರು. ಈ ಬಗ್ಗೆ ಕೂಡ ಆರ್​. ಅಶೋಕ್ ಮಾತನಾಡಿದ್ದಾರೆ.
ಹಿಂದೆ ದಿನೇಶ್​ ಗುಂಡೂರಾವ್​ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಯಾವುದಕ್ಕೂ ದೇಣಿಗೆ ನೀಡಿರಲಿಲ್ಲ. ಈಗ ಡಿ.ಕೆ.ಶಿವಕುಮಾರ್ ಅವರು ಅಧ್ಯಕ್ಷರಾಗುತ್ತಿದ್ದಂತೆ ಏಕಾಏಕಿ ದುಡ್ಡು ಬರ್ತಿದೆ. ಅದು ನಮಗೆ ತೀವ್ರ ಆಶ್ಚರ್ಯವನ್ನುಂಟು ಮಾಡಿದೆ ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್​ ಅಧ್ಯಕ್ಷರು ನೀಡಿದ ಚೆಕ್​ ಮೇಲೆ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಹೆಸರು ಇದೆ. ಆದರೆ ಡಿ.ಕೆ.ಶಿವಕುಮಾರ್​ ತಾವು ಚೆಕ್​ ಕೊಟ್ಟಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅದರ ಮೇಲೆ ಡಿಕೆಶಿ ಸಹಿ ಇಲ್ಲ. ಇವರಿಗೆ ಅಕೌಂಟ್​ ಚೇಂಜ್​ ಮಾಡುವ ಜ್ಞಾನ ಕೂಡ ಇಲ್ಲ. ಹಾಗಾಗಿ ಚೆಕ್​ ನಕಲಿ. ನಾವದನ್ನು ತೆಗೆದುಕೊಂಡಿಲ್ಲ ಎಂದು ಆರ್​. ಅಶೋಕ್​ ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಕೆಎಸ್​ಆರ್​ಟಿಸಿಗೆ 1 ಕೋಟಿ ರೂ. ದೇಣಿಗೆ ಕೊಟ್ಟ ಕೆಪಿಸಿಸಿ, ಕಾರ್ಮಿಕರ ಕಷ್ಟ ಆಲಿಸಿದ ಕಾಂಗ್ರೆಸ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 13 =
Remember me
