ಬೆಂಗಳೂರು:ಮುಖ್ಯಮಂತ್ರಿ ತವರು ಜಿಲ್ಲೆಯಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಕೋಟ್ಯಂತರ ರೂ. ಹಗರಣ ನಡೆದಿರುವುದು ಇದೀಗ ಬೆಳಕಿಗೆ ಬಂದಿದೆ. 50:50ರ ಅನುಪಾತ, ಪ್ರೋತ್ಸಾಹದಾಯಕ ನಿವೇಶನ (ಇನ್​ಸೆಂಟಿವ್​) ಬದಲಿ ನಿವೇಶನ ಹಂಚಿಕೆಯಲ್ಲಿ ಭಾರಿ ಗೋಲ್​ಮಾಲ್ ನಡೆದಿದ್ದು, ಒಟ್ಟಾರೆ 4,500 ರಿಂದ 5000 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಇದರಿಂದ ಮುಡಾಕ್ಕೆ ಅಂದಾಜು 4000 ಕೋಟಿ ರೂ. ನಷ್ಟ ಉಂಟಾಗಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ವಿಪಕ್ಷ ನಾಯಕ ಆರ್​. ಅಶೋಕ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಿದು ಎಂದು ಗುಡುಗಿದ್ದಾರೆ.
ಇದನ್ನೂ ಓದಿ:ಅಭಿವೃದ್ಧಿ ಯೋಜನೆ ಪಟ್ಟಿ ಸಿದ್ದ: ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ರವೀಂದ್ರ ಮಾಹಿತಿ
“ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಾದ 4,000 ಕೋಟಿ ರೂ. ಮೌಲ್ಯದ ಮುಡಾ ಹಗರಣದಲ್ಲಿ ದಿನಕ್ಕೊಂದು ಕರ್ಮಕಾಂಡ ಬಯಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಮಂಜೂರಾಗಿರುವ 35 ಕೋಟಿ ರೂಪಾಯಿ ಮೌಲ್ಯದ 14 ನಿವೇಶನಗಳಿಗೆ ಸಂಬಂಧಪಟ್ಟ ಕಡತಗಳನ್ನು ತಿರುಚುವ ಉದ್ದೇಶದಿಂದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್​ ಅವರು ಕಡತಗಳನ್ನು ಬೆಂಗಳೂರಿಗೆ ತಂದಿರುವ ಗುಮಾನಿ ಇದೆ” ಎಂದಿದ್ದಾರೆ.
“ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಈ ಕೂಡಲೇ ಸಂಬಂಧಪಟ್ಟ ಕಡತಗಳನ್ನು ಬಹಿರಂಗಪಡಿಸಿ, ಸಾರ್ವಜನಿಕರ ಮುಂದಿಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ನಾನು ಈ ಮೂಲಕ ಒತ್ತಾಯಿಸುತ್ತೇನೆ” ಎಂದು ತಿಳಿಸಿದ್ದಾರೆ.
ನಾನು ಬದುಕಿರುವವರೆಗೂ ಇದನ್ನು ಮರೆಯಲು ಸಾಧ್ಯವಿಲ್ಲ: ಸುರೇಶ್ ರೈನಾ ಭಾವುಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − one =
Remember me
