ಬೆಂಗಳೂರು:ಸ್ಯಾಂಡಲ್​ವುಡ್ ನಟಿ, ಕಾಂಗ್ರೆಸ್ ನಾಯಕಿ ರಮ್ಯಾ ಸಂದರ್ಶನವೊಂರಲ್ಲಿ ಮಾತನಾಡುತ್ತಾ, ನನಗೆ ಬಿಜೆಪಿಯಿಂದ ಆಫರ್ ಬಂದಿತ್ತು. ಪ್ರಭಾವಿ ನಾಯಕರೊಬ್ಬರು ಕರೆ ಮಾಡಿ, ನಮ್ಮ ಪಕ್ಷಕ್ಕೆ ಬನ್ನಿ. ನಾಳೆಯೇ ನಿಮ್ಮನ್ನು ಮಂತ್ರಿ ಮಾಡುತ್ತೇವೆ ಎಂದು ಹೇಳಿದ್ದರು. ನಾನು ಕಾಂಗ್ರೆಸ್‌ ವಿರುದ್ಧ ಮಾತನಾಡಿದ್ದಾಗ ಬಿಜೆಪಿ ಸೇರಲು ಆಹ್ವಾನ ಬಂದಿತ್ತು ಎಂದು ಹೇಳಿಕೊಂಡಿದ್ದರು.
ಇದನ್ನೂ ಓದಿ:ಕಾಂಗ್ರೆಸ್​ನ ಗುಂಡಿಯೊಳಗೆ ನೀರಿಲ್ಲ! ಡಿಕೆಶಿ ಟೀಕೆಗೆ ಟಾಂಗ್ ನೀಡಿದ ಸಿಎಂ
ರಮ್ಯಾ ತನಗೆ ಬಿಜೆಪಿಯಿಂದ ಆಹ್ವಾನ ಬಂದಿತ್ತು ಎಂಬುದನ್ನು ಬಹಿರಂಗಪಡಿಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ಸಾಕಷ್ಟು ಸದ್ದು ಮಾಡಿದೆ. ಇದೀಗ ಈ ವಿಚಾರವಾಗಿ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿ, ರಮ್ಯಾ ಅವರನ್ನು ಪಕ್ಷಕ್ಕೆ ಕರೆಯುವಷ್ಟು ಬಿಜೆಪಿ ಬರಗೆಟ್ಟು ಹೋಗಿಲ್ಲ ಎಂದು ಟಾಂಗ್ ನೀಡಿದ್ದಾರೆ. ನಾವು ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರೇ ಬಿಟ್ಟು ಹೋದ ಸಮಯದಲ್ಲಿ ತಲೆಕೆಡಿಸಿಕೊಂಡಿಲ್ಲ ಎಂದರು.
ಇದನ್ನೂ ಓದಿ:ಪಂಜಾಬ್​ ಪೊಲೀಸರ ಮುಂದೆ ಶರಣಾದ ಸಿಖ್​ ಮೂಲಭೂತವಾದಿ ಅಮೃತ್​ಪಾಲ್​ ಸಿಂಗ್!
ರಮ್ಯಾ ಕಾಂಗ್ರೆಸ್​ನಲ್ಲಿದ್ದವರು. ಅವರ ವೈಯಕ್ತಿಕ ಲಾಭಕ್ಕಾಗಿ ಬಿಜೆಪಿಯಿಂದ ಆಹ್ವಾನ ಬಂದಿತ್ತು ಎಂದು ಹೇಳಿರಬಹುದು. ನಮ್ಮ ಪಕ್ಷದಿಂದ ರಮ್ಯ ಅವರಿಗೆ ಯಾವುದೇ ಆಹ್ವಾನ ಕೊಟ್ಟಿಲ್ಲ. ಚುನಾವಣೆ ಸಮಯ ಆದುದರಿಂದ ರಮ್ಯಾ ರಾಜಕೀಯ ಹೇಳಿಕೆ ಕೊಟ್ಟಿದ್ದಾರೆ. ಈ ಸಮಯದಲ್ಲಿ ಎಲ್ಲರೂ ಹೀರೋ ಆಗಲು ಪ್ರಯತ್ನಿಸುವುದು ಸಾಮಾನ್ಯ. ಚುನಾವಣೆ ವೇಳೆ ಕಾಂಗ್ರೆಸ್​ಗೆ ಸಹಾಯ ಆಗಲಿ ಎಂದು ರಮ್ಯಾ ಇಂತಹ ಮಾತುಗಳನ್ನಾಡಿದ್ದಾರೆ ಎಂದು ಆರ್​.ಅಶೋಕ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 3 =
Remember me
