ಬೆಂಗಳೂರು:ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡವೆಂದರೆ ನಿಕೃಷ್ಟ, ಕನ್ನಡ ನಾಡಿನ ಕಲೆ ಸಂಸ್ಕೃತಿ ಅಂದರೆ ಕನಿಷ್ಠ. ಸಿಎಂಸಿದ್ದರಾಮಯ್ಯನವರ ಸರ್ಕಾರದಲ್ಲಿ ಸಿಕ್ಕಸಿಕ್ಕವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಕೊಟ್ಟು ಮೆರೆಸಲು ದುಡ್ಡಿದೆ, ಶಾಸಕರಿಗೆ, ಮಂತ್ರಿಗಳಿಗೆ ಕೋಟಿಗಟ್ಟಲೆ ಬೆಲೆಬಾಳುವ ಐಷಾರಾಮಿ ಕಾರು ಖರೀದಿ ಮಾಡಲು ದುಡ್ಡಿದೆ, ನಿಗಮ ಮಂಡಳಿಗಳಲ್ಲಿ, ಟೆಂಡರ್ ಕಿಕ್ ಬ್ಯಾಕ್​ಗಳಲ್ಲಿ ನೂರಾರು ಕೋಟಿ ಲೂಟಿ ಮಾಡಲು ದುಡ್ಡಿದೆ, ಆದರೆ ನಾಡಿನ ಹೆಮ್ಮೆಯ ಸಂಗೀತ ಸರಸ್ವತಿ ಪದ್ಮಭೂಷಣ ಡಾ.ಗಂಗೂಬಾಯಿ ಹಾನಗಲ್ ಅವರ ಜ್ಞಾಪಕಾರ್ಥವಾಗಿ ಹುಬ್ಬಳ್ಳಿಯಲ್ಲಿ ಸ್ಥಾಪಿಸಿರುವ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗುರುಕುಲಕ್ಕೆ ವಾರ್ಷಿಕ 1.25 ಕೋಟಿ ರೂ. ಅನುದಾನ ನೀಡಲು ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಕಾಮಗಾರಿ ಸ್ಥಗಿತಗೊಳಿಸಲು ಗುತ್ತಿಗೆದಾರರ ನಿರ್ಧಾರ : ಬ್ರೇಕ್‌ಡೌನ್ ಕೆಲಸದ ದರ ಭಾರಿ ಇಳಿಕೆಯಿಂದ ನಷ್ಟ ಹಿನ್ನೆಲೆ
“ಸಿಎಂ ಸಿದ್ದರಾಮಯ್ಯನವರೇ ಕಲಾವಿದರಿಗೆ ಪಿಂಚಣಿ ನೀಡುವುದಕ್ಕೆ ಹಣವಿಲ್ಲ, ಕಲಾತಂಡಗಳಿಗೆ ಧನ ಸಹಾಯಕ್ಕೆ ದುಡ್ಡಿಲ್ಲ. ರಾಜ್ಯ, ಜಿಲ್ಲಾಮಟ್ಟದ ಸಾಹಿತ್ಯ ಸಮ್ಮೇಳನಕ್ಕೆ ದುಡ್ಡಿಲ್ಲ ರಂಗಮಂದಿರ, ಬಯಲು ಮಂದಿರಗಳಿಗೆ ಹಣ ನೀಡುತ್ತಿಲ್ಲ, ಕನ್ನಡ-ಸಂಸ್ಕೃತಿ ಇಲಾಖೆಗೆ ನಿಗದಿ ಹಣ ನೀಡುತ್ತಿಲ್ಲ. ಕಲೆ ಮತ್ತು ಸಂಸ್ಕೃತಿಗೆ ಮೀಸಲು ಹಣವಿಲ್ಲ, ಕಲಾಸಂಘಗಳಿಗೂ ನೀಡುವುದಕ್ಕೂ ರೊಕ್ಕವಿಲ್ಲ. ಇದೇನಾ ನೀವು ನಮ್ಮ ನಾಡಿನ ಕಲೆ ಸಂಸ್ಕೃತಿಗೆ ಬೆಲೆ ನೀಡುವ ಪರಿ?” ಎಂದು ಕಿಡಿಕಾರಿದರು.
“ಚುನಾವಣೆ ಬಂದರೆ ಸಾಕು ಭಾಷೆಯ ವಿಷಯದಲ್ಲಿ ಕೀಳು ರಾಜಕಾರಣ ಮಾಡುವ ನೀವು ಕನ್ನಡದ ಕೆಲಸಕ್ಕೆ ಕವಡೆ ಕಿಮ್ಮತ್ತು ಕೊಡುತ್ತಿಲ್ಲ. ನಾಡು, ನುಡಿ, ಸಂಸ್ಕೃತಿಯ ಬೆಳವಣಿಗೆಗೆ ನೀಡಬೇಕಿದ್ದ ಅನುದಾನಕ್ಕೆ ಕೊಕ್ಕೆ ಹಾಕುವ ಮೂಲಕ ನಿಮ್ಮ ಸರ್ಕಾರ ಮಾತೃಭಾಷೆಗೆ, ನಾಡಿನ ಸಂಸ್ಕೃತಿಗೆ ದ್ರೋಹ ಬಗೆದಿದೆ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇವರ ಬೌಲಿಂಗ್​ ಎದುರಿಸಲು ಭಯಪಡ್ತಾರೆ ವಿರಾಟ್ ಮತ್ತು ರೋಹಿತ್ ಶರ್ಮ! ಆ ಸ್ಟಾರ್ ವೇಗಿ ಯಾರು ಗೊತ್ತಾ?

ಎಲ್ಲಿದೆ ನಿಮ್ಮ ತಲೆ? ಇಂತಹ ಹೋಲಿಕೆ ಹೇಗೆ ಮಾಡ್ತೀರಾ… ಪಾಕಿಸ್ತಾನಿ ಪತ್ರಕರ್ತನಿಗೆ ಚಳಿಬಿಡಿಸಿದ ‘ಬಜ್ಜಿ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 8 =
Remember me
