ಬೆಂಗಳೂರು:2013ರಲ್ಲಿ ಶುದ್ಧಹಸ್ತರಲ್ಲ ಎಂದು ಡಿ.ಕೆ. ಶಿವಕುಮಾರ್ ಅವರನ್ನೇ ಒಂದು ವರ್ಷ ಸಂಪುಟದಿಂದ ಹೊರಗಿಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರು ಈಗ ತಮ್ಮ ಎರಡನೇ ಅವಧಿಯಲ್ಲಿ ಭ್ರಷ್ಟಾಚಾರದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿರುವ ಒಬ್ಬ ಸಚಿವನ ರಾಜೀನಾಮೆಯನ್ನೂ ಪಡೆಯಲಾಗದಷ್ಟು ದುರ್ಬಲರಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್​. ಅಶೋಕ ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಪ್ರತಿಯೊಬ್ಬರು ತಮ್ಮ ಆರೋಗ್ಯದ ಮೇಲೆ ಹೆಚ್ಚಿನ ಗಮನ ಹರಿಸಬೇಕು: ಡಾ. ತೇಜಸ್ವಿನಿ ಹಿರೇಮಠ.
“ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಪರಿಸ್ಥಿತಿ ಕಂಡರೆ ಅಯ್ಯೋ ಎಂದು ಕನಿಕರ ಮೂಡುತ್ತಿದೆ. ಭ್ರಷ್ಟ ಸಚಿವರಿಂದ ಬ್ಲಾಕ್ ಮೇಲ್ ಮಾಡಿಸಿಕೊಂಡು ಕುರ್ಚಿ ಉಳಿಸಿಕೊಳ್ಳುವಂತಹ ದುರ್ಗತಿ ನಿಮಗೆ ಬರಬಾರದಿತ್ತು. ಕರ್ನಾಟಕದ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ಕುಖ್ಯಾತಿ ಪಡೆದುಕೊಳ್ಳುವ ಬದಲು ರಾಜೀನಾಮೆ ಕೊಟ್ಟು ಗೌರವದಿಂದ ನಿವೃತ್ತರಾಗಿ” ಎಂದಿದ್ದಾರೆ.
ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕರ ಆಗ್ರಹದ ಬೆನ್ನಲ್ಲೇ ಆರ್​. ಅಶೋಕ ಅವರ ಈ ಹೇಳಿಕೆ ಮುನ್ನೆಲೆಗೆ ಬಂದಿದೆ.
ನನಗಿರುವುದು ಇದೊಂದೇ ಆಸೆ… ‘3’ರ ಹಿಂದೆ ಬಿದ್ದ ಕೆಕೆಆರ್​ ಮೆಂಟರ್ ಗೌತಮ್​ ಗಂಭೀರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + sixteen =
Remember me
