ಬೆಂಗಳೂರು:ಕಳೆದ ಬಾರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಹೇಗೆ ಸೃಷ್ಟಿಸಿದೆ? ರಾಜ್ಯದ ಪಾಲಿನ ಹಣವನ್ನು ಕೊಡದೆ ಇರುವುದರಿಂದ ಸೃಷ್ಟಿಯಾಗಿರುವ ಪರಿಸ್ಥಿತಿಯನ್ನು ವಿವರಿಸಿದ್ದರು. ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆಯಿದೆ ಎಂದು ಹೇಳಿದ್ದರು.
ಇದನ್ನೂ ಓದಿ:ಸೈಕೋ ಮುಲಾಮು ರಾಜ! ದರ್ಶನ್​ಗೆ ಇದೆಯಂತೆ ಈ ಮಾನಸಿಕ ಕಾಯಿಲೆ, ನೋಡಿದ್ರೆ ಪಾಪ ಅನಿಸುತ್ತದೆಯಂತೆ
ಸದ್ಯ ಇದೇ ವಿಚಾರವನ್ನು ಮುಂದಿಟ್ಟು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಆರ್​. ಅಶೋಕ, “ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪೆಟ್ರೋಲ್- ಡೀಸೆಲ್ ಬೆಲೆ ಹೋಲಿಕೆ ಮಾಡಿ ತಮ್ಮ ನಿರ್ಧಾರವನ್ನು ಸಮರ್ಥನೆ ಮಾಡಿಕೊಳ್ಳುತ್ತೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಈಗ ಕಾಂಗ್ರೆಸ್ ಆಡಳಿತದ ನೆರೆಯ ತೆಲಂಗಾಣ ರಾಜ್ಯದಲ್ಲಿ 2 ಲಕ್ಷ ರೂಪಾಯಿವರೆಗೆ ರೈತರ ಸಾಲ ಮನ್ನಾ ಮಾಡಲು ಅಲ್ಲಿನ ಸರ್ಕಾರ ನಿರ್ಧರಿಸಿದೆ” ಎಂದು ಹೇಳಿದ್ದಾರೆ.
“ತಾವು ಹೇಳಿಕೊಳ್ಳುವಂತೆ ನಮ್ಮ ರಾಜ್ಯದ ಬೊಕ್ಕಸ ಭರ್ತಿಯಾಗಿದ್ದರೆ, ಹಣಕಾಸು ಪರಿಸ್ಥಿತಿ ಚೆನ್ನಾಗಿರುವುದೇ ನಿಜವಾಗಿದ್ದರೆ, ನಮ್ಮ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಿ ರೈತರನ್ನು ಋಣಮುಕ್ತರನ್ನಾಗಿ ಮಾಡಿ” ಎಂದು ಆಗ್ರಹಿಸಿದ್ದಾರೆ.
ಅಂದು ಅಪ್ಪು ಮತ್ತು ಸುದೀಪ್​ ಸರ್​​ ಹಲ್ಲುಕಚ್ಚಿಕೊಂಡು ಸುಮ್ಮನಿದ್ರು: ನಿರ್ಮಾಪಕ ಉಮಾಪತಿ ಸ್ಪೋಟಕ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 2 =
Remember me
