ಬೆಂಗಳೂರು:ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್​ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯ ವಿರುದ್ಧ ಕಿಡಿಕಾರಿದ ವಿಪಕ್ಷ ನಾಯಕ ಆರ್​. ಆಶೋಕ, ಬೆಳಗಾವಿಯಲ್ಲಿ ವಿಠಲ್ ಅರಬಾವಿ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ, ಕುಡಿದು ಸತ್ತ ಎಂದು ವ್ಯಂಗ್ಯವಾಡಿದ್ದನ್ನು ಮರೆತಿಲ್ಲ ಎಂದು ಗುಡುಗಿದ್ದಾರೆ.
ಇದನ್ನೂ ಓದಿ:ಅತ್ಯಾಚಾರ ಪ್ರಕರಣ: ನ್ಯಾಯ ಕೊಡಿಸಿ, ನೀರಿನ ಟ್ಯಾಂಕ್ ಏರಿ ಕಣ್ಣೀರಿಟ್ಟ ಸಂತ್ರಸ್ತೆ!
ಈ ಕುರಿತಂತೆ ಟ್ವೀಟ್ ಮಾಡಿದ ಅವರು, “ಸಿಎಂ ಸಿದ್ದರಾಮಯ್ಯ ಅವರೇ, ತಾವು ಮೊದಲ ಮುಖ್ಯಮಂತ್ರಿಯಾಗಿದ್ದಾಗ ಕಳಸಾ- ಬಂಡೂರಿ ಅನುಷ್ಠಾನಕ್ಕೆ ಕರ್ನಾಟಕದ ರೈತರು ಪ್ರತಿಭಟನೆ ಮಾಡಿದ ಸಂದರ್ಭದಲ್ಲಿ ತಮ್ಮ ಸರ್ಕಾರ ರೈತರನ್ನು, ರೈತರ ಮೇಲೆ ಲಾಠಿ ಬೀಸಿದ್ದನ್ನು ರಾಜ್ಯದ ಜನ ಮರೆತಿಲ್ಲ” ಎಂದರು.
“ಬೆಳಗಾವಿಯಲ್ಲಿ ವಿಠಲ್ ಅರಬಾವಿ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ, ಕುಡಿದು ಸತ್ತ ಎಂದು ವ್ಯಂಗ್ಯವಾಡಿದ್ದನ್ನು ಸಹ ಮರೆತಿಲ್ಲ. ಇತ್ತೀಚೆಗೆ ತಮ್ಮ ಮಂತ್ರಿಗಳು, ಪರಿಹಾರಕ್ಕೋಸ್ಕರ, ಸಾಲ ಮನ್ನಾ ಆಗುತ್ತದೆ ಎನ್ನುವ ಆಸೆಯಿಂದ ಬರಲಿ ಎಂದು ಆಶಿಸುತ್ತಾರೆ ಎಂದು ಅನ್ನದಾತರನ್ನು ಅವಮಾನಿಸಿದ್ದನ್ನೂ ಕೂಡ ಜನ ಮರೆತಿಲ್ಲ” ಎಂದರು.
ಇದನ್ನೂ ಓದಿ:ರಸ್ತೆ ಅಪಘಾತದಲ್ಲಿ ವಿಶ್ವ ದಾಖಲೆಯ ಮ್ಯಾರಥಾನ್ ಓಟಗಾರ ಕೆಲ್ವಿನ್ ಸಾವು
ತಮ್ಮ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು “ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನುವುದಿಲ್ಲವೇ?” ಎಂದು ನಿಂದಿಸಿದ್ದನ್ನೂ ಜನ ಮರೆತಿಲ್ಲ. ಈಗ ಚುನಾವಣೆ ಹೊಸ್ತಿಲಲ್ಲಿರುವಾಗ ತಮ್ಮ ನಾಟಕವನ್ನು ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಕರ್ನಾಟಕದ ರೈತರು ನಂಬುತ್ತಾರೆಯೇ? ನಿಮ್ಮ ನಾಟಕ ಸಾಕು, ಮೊದಲು ರೈತರಿಗೆ ಬರ ಪರಿಹಾರ ಕೊಡುವತ್ತ ಗಮನ ಹರಿಸಿ ಎಂದು ಹೇಳಿದ್ದಾರೆ.
ಈ ನಟನ ಮೊದಲ ಪೇಮೆಂಟ್​ ಕೇವಲ 50 ರೂ.! ಇಂದು ಅತಿ ಹೆಚ್ಚು ಸಂಭಾವನೆ ಪಡೆಯುವ ಕನ್ನಡದ ಸ್ಟಾರ್​…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 5 =
Remember me
