ಬೆಂಗಳೂರು:ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 15ನೇ ಬಜೆಟ್​ ಮಂಡಿಸಿದ್ದು, ಇದೊಂದು “ಅಡ್ಡಕಸುಬಿ” ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್​ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಆರ್​. ಅಶೋಕ್​ ತಮ್ಮ ಎರಡನೇ ಅವಧಿಯಲ್ಲೂ ಸಿಎಂ ಸಿದ್ದರಾಮಯ್ಯನವರು ಕರ್ನಾಟಕವನ್ನ ದೊಡ್ಡ ಸಾಲದ ಸುಳಿಯಲ್ಲಿ ಸಿಲುಕಿಸಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಸಾಂವಿಧಾನಿಕ ಕರ್ತವ್ಯ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು “ಅಡ್ಡಕಸುಬಿ” ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ. ಸಾಧನೆಯ ಬಲದಿಂದಾಗಲಿ, ಅಭಿವೃದ್ಧಿ ಕೆಲಸಗಳಿಂದಾಗಲಿ ಲೋಕಸಭೆ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ತಿಳಿದಿರುವ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆಯ ಪವಿತ್ರ ಸಾಂವಿಧಾನಿಕ ಕರ್ತವ್ಯವನ್ನ ಚುನಾವಣಾ ಭಾಷಣದಂತೆ ದುರ್ಬಳಕೆ ಮಾಡಿಕೊಂಡು ಸಂವಿಧಾನಕ್ಕೆ ಮತ್ತು ಮತ ನೀಡಿ ಅಧಿಕಾರ ಕೊಟ್ಟ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ.
ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಸಾಂವಿಧಾನಿಕ ಕರ್ತವ್ಯ. ಆದರೆ ಮುಖ್ಯಮಂತ್ರಿ@siddaramaiahಅವರು ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘’ಅಡ್ಡಕಸುಬಿ’’ ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ.ಸಾಧನೆಯ ಬಲದಿಂದಾಗಲಿ, ಅಭಿವೃದ್ಧಿ ಕೆಲಸಗಳಿಂದಾಗಲಿ…
ಇದನ್ನೂ ಓದಿ:ರಾಜ್ಯ ಬಜೆಟ್; ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲು
ಸಿದ್ದರಾಮಯ್ಯನವರು ತಮ್ಮ ಮೊದಲ ಅವಧಿಯಲ್ಲಿ ಮಾಡಿದ ಅತಿದೊಡ್ಡ ಸಾಧನೆ ಎಂದರೆ ಒಂದು ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿ ರಾಜ್ಯದ ಪ್ರತಿಯೊಬ್ಬ ಪ್ರಜೆಯ ತಲೆಯ ಮೇಲೆ ₹44,000ಕ್ಕೂ ಅಧಿಕ ಸಾಲದ ಹೊರೆ ಹೇರಿದ್ದು. ಆ ಭಾಗ್ಯ ಈ ಭಾಗ್ಯ ಎಂದು ಎಂದು ರಾಜ್ಯದ ಜನತೆಯ ಮೇಲೆ ಸಾಲ ಭಾಗ್ಯ ಹೊರಿಸಿ ಹಳಿ ತಪ್ಪಿಸಿದ್ದ ರಾಜ್ಯದ ವಿತ್ತೀಯ ಶಿಸ್ತನ್ನ, ಬಿಜೆಪಿ ಸರ್ಕಾರ ಕೋವಿಡ್ ಸಂಕಷ್ಟದ ಹೊರತಾಗಿಯೂ ಸರಿದಾರಿಗೆ ತಂದಿತ್ತು.
ಆದರೆ ಈಗ ತಮ್ಮ ಎರಡನೇ ಅವಧಿಯಲ್ಲೂ ಸಿಎಂ ಸಿದ್ದರಾಮಯ್ಯನವರು ಕರ್ನಾಟಕವನ್ನ ದೊಡ್ಡ ಸಾಲದ ಸುಳಿಯಲ್ಲಿ ಸಿಲುಕಿಸಲು ಹೊರಟಿದ್ದಾರೆ. “ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು” ಎಂಬುದು ಈ ಸರ್ಕಾರದಲ್ಲಿ “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ” ಎಂಬಂತಾಗಿದೆ. ಒಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ಇಲ್ಲದ “ಅಡ್ಡಕಸುಬಿ” ಬಜೆಟ್. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು‌‌ ‘ಸಾಲರಾಮಯ್ಯನ ಸೋಗಲಾಡಿ’ ಬಜೆಟ್ ಆಗಿದೆ ಎಂದು ಹರಿಹಾಯ್ದಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 3 =
Remember me
