ಬೆಂಗಳೂರು:ರಾಜ್ಯದಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ದಿನದಿಂದ ದಿನಕ್ಕೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ, ಆರೋಪಗಳು ವ್ಯಕ್ತವಾಗುತ್ತಿವೆ. ಈ ಮಧ್ಯೆ ವಿಪಕ್ಷ ನಾಯಕ ಆರ್​. ಅಶೋಕ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಎಸ್​ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.
ಇದನ್ನೂ ಓದಿ:ಗೌರವ ಡಾಕ್ಟರೇಟ್​ ಪದವಿಯನ್ನು ತಿರಸ್ಕರಿಸಿದ ನಟ ಕಿಚ್ಚ ಸುದೀಪ್​; ಕೊಟ್ಟ ಕಾರಣ ಹೀಗಿದೆ
“ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ತಮ್ಮ ಡೆತ್​ನೋಟ್​ನಲ್ಲಿ ಸಚಿವ ನಾಗೇಂದ್ರ ಅವರ ಮೌಖಿಕ ಆದೇಶದಂತೆ ಅವ್ಯವಹಾರ ನಡೆದಿದೆ ಎಂದು ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದರೂ, ಎಸ್​ಐಟಿ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸವರಾಜ ದದ್ದಲ್ ಹೆಸರನ್ನು ನಮೂದಿಸಿಲ್ಲದಿರುವುದು ಎಸ್.ಐ.ಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ” ಎಂದರು.
“ಸಿದ್ದರಾಮಯ್ಯನವರೇ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ದದ್ದಲ್ ಅವರ ಹೆಸರನ್ನು ನಮೂದಿಸಿದರೆ ಅವರು ತಮ್ಮ ಹೆಸರು ಬಾಯಿ ಬಿಡುತ್ತಾರೆ ಎಂಬ ಭಯವೇ? ಅಥವಾ ಈ ಹಗರಣವನ್ನು ಶಾಶ್ವತವಾಗಿ ಮುಚ್ಚಿಹಾಕುವ ಹುನ್ನಾರವೇ?” ಎಂದು ಪ್ರಶ್ನಿಸಿದ್ದಾರೆ.
ದಯವಿಟ್ಟು ಬಿಟ್ಟು ಹೋಗಬೇಡಿ ಸರ್​… ನೆಚ್ಚಿನ ಶಿಕ್ಷಕನ ವರ್ಗಾವಣೆ ಸುದ್ದಿಗೆ ಬಿಕ್ಕಿಬಿಕ್ಕಿ ಅತ್ತ ವಿದ್ಯಾರ್ಥಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 12 =
Remember me
