ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರ ಪರಿಹಾರ ಬಿಡುಗಡೆಯ ವಿರುದ್ಧ ಖಂಡಿತವಾಗಿ ನ್ಯಾಯಾಲಯದ ಮೊರೆ ಹೋಗಲಿ ಹಾಗೂ ಛೀಮಾರಿ ಹಾಕಿಸಿಕೊಂಡು ಬರಲಿ ಎಂದು ನಾನು ಆಶಿಸುತ್ತೇನೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ವ್ಯಂಗ್ಯವಾಡಿದರು.
ಇದನ್ನೂ ಓದಿ:ಈ ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತದೆ; ತಂದೆಯ ಮುಖದ ಮೇಲೆ 25 ಬಾರಿ ಗುದ್ದಿ ಕೊಂದೆ ಬಿಟ್ಟ ಪಾಪಿ ಮಗ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕರ್ನಾಟಕ ರಾಜಕಾರಣದ ಇತಿಹಾಸದಲ್ಲೇ ದಾಖಲೆಯ ಪ್ರಮಾಣದ ಬರ ಪರಿಹಾರವನ್ನು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ನೀಡಿದೆ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಹಿಂದೆ ಯಾವುದೇ ನೆರವು ನೀಡಲಿಲ್ಲ. ಅದನ್ನು ಹೇಳುವ ಯೋಗ್ಯತೆ ಕೂಡ ರಾಜ್ಯ ಕಾಂಗ್ರೆಸ್ ನಾಯಕರಿಗಿಲ್ಲ. ಹಿಂದೆ ಬರ-ಪ್ರವಾಹ ಪರಿಹಾರ ಕೇಳಿದ್ದಾಗ ಯುಪಿಎ ಸರ್ಕಾರ 8-9% ಮಾತ್ರ ಪರಿಹಾರ ನೀಡಿದೆ. ಆದರೆ ಮೋದಿ ಸರ್ಕಾರ ಹೆಚ್ಚುವರಿ ಪರಿಹಾರ ನೀಡಿದೆ” ಎಂದರು.
“ನಾನು ಅಂಕಿ ಅಂಶ ಸಮೇತ ಸವಾಲು ಹಾಕಿದ್ದರೂ ಅದರ ಬಗ್ಗೆ ಯಾರೂ ಮಾತಾಡುತ್ತಿಲ್ಲ. ಇದನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರ ನ್ಯಾಯಾಲಯಕ್ಕೆ ಹೋದರೆ ಎಲ್ಲ ಹಿಂದಿನ ವಿಚಾರ ಹೊರಬರಲಿದೆ. ನ್ಯಾಯಾಲಯದಿಂದ ಸರ್ಕಾರ ಛೀಮಾರಿ ಹಾಕಿಸಿಕೊಳ್ಳಲಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಕಾನೂನಿನಡಿ ಎಲ್ಲರೂ ಸಮಾನರು. ಸರ್ಕಾರ ತನಿಖೆ ಮಾಡಲು ತಂಡ ರಚಿಸಿದ್ದು, ತೀರ್ಪು ಬಂದ ನಂತರ ಸರ್ಕಾರ ಕ್ರಮ ವಹಿಸಲಿದೆ” ಎಂದರು.
ಇದನ್ನೂ ಓದಿ:ಶ್ರೀನಿವಾಸ್​ ಪ್ರಸಾದ್​ ಅಗಲಿಕೆಗೆ ಸಂತಾಪ ಸೂಚಿಸಿದ ಬಿ.ಎಸ್​. ಯಡಿಯೂರಪ್ಪ
“ಲೋಕಸಭಾ ಚುನಾವಣೆಯ ಎರಡನೇ ಹಂತದ ಪ್ರಚಾರದಲ್ಲಿ ನಾನು ಕೂಡ ತೊಡಗಿಸಿಕೊಂಡಿದ್ದೇನೆ. ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಉತ್ತಮ ಪ್ರಚಾರ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಪಾಲ್ಗೊಂಡಿದ್ದಾರೆ” ಎಂದು ಆರ್.ಅಶೋಕ್ ಹೇಳಿದರು.
ಇನ್ನೇನು ತಾಳಿ ಕಟ್ಟಬೇಕು ಅಷ್ಟರೊಳಗೆ ಅವನು ಬೇಡ ಎಂದಳು ವಧು! ಆಕೆ ಕೊಟ್ಟ ಕಾರಣ ಕೇಳಿ ವರ ಕಂಗಾಲು

ಡೆಲ್ಲಿ ವಿರುದ್ಧದ ಸೋಲಿಗೆ ತಿಲಕ್ ವರ್ಮ ಕಾರಣ ಎಂದ ಹಾರ್ದಿಕ್ ಪಾಂಡ್ಯ! ನೀನೆಂಥ ಕ್ಯಾಪ್ಟನ್​? ಫ್ಯಾನ್ಸ್​ ಕಿಡಿ

ಮತ್ತೊಂದು ದಾಖಲೆ ಬರೆದ ಧೋನಿ! ನಿಮಗೆ ಸರಿಸಾಟಿ ಯಾರು? ಜಗಮೆಚ್ಚಿದ ಕ್ಯಾಪ್ಟನ್​ಗೆ ಫ್ಯಾನ್ಸ್ ಫಿದಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 2 =
Remember me
