ಬೆಂಗಳೂರು:“ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್. ಅಶೋಕ, ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ದಿನಕ್ಕೊಂದು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಲೇ ಇದ್ದು, ಇಡಿ ದಾಳಿ, ಮಾಜಿ ಸಚಿವ ಬಿ.ನಾಗೇಂದ್ರ ಹಾಗು ನಿಗಮದ ಮಾಜಿ ಅಧ್ಯಕ್ಷ ಬಸನಗೌಡ ದದ್ದಲ್ ಎಸ್ಐಟಿ ವಿಚಾರಣೆಗೆ ಗೈರಾಗಿರುವುದು ಮತ್ತಷ್ಟು ಅನುಮಾನಗಳಿಗೆ ಎಡ ಮಾಡಿಕೊಟ್ಟಿದೆ” ಎಂದರು.
ಇದನ್ನೂ ಓದಿ:ಜೈಲಿನಲ್ಲಿ ಅಪ್ಪನ ಸ್ಥಿತಿ ಕಂಡು ಕಣ್ಣೀರಿಟ್ಟ ಮಗ ವಿನೀಶ್‌! ಪತ್ನಿ ಬಳಿ ದರ್ಶನ್​ ಹೇಳಿದ್ದು ಅದೊಂದೆ ಮಾತು..
“ಸಿಎಂ ಸಿದ್ದರಾಮಯ್ಯನವರೇ, ಆರೋಪಿಗಳು ಎಸ್ಐಟಿ ವಿಚಾರಣೆಗೆ ಗೈರಾಗುತ್ತಿರುವುದು ಯಾಕೆ? ವಿಚಾರಣೆಗೆ ಹಾಜರಾದರೆ ನಿಮ್ಮ ಹೆಸರು ಬಾಯಿ ಬಿಡುತ್ತಾರೆ ಎನ್ನುವ ಭಯವೇ? ಎಸ್ಐಟಿ ಹೆಸರಿನಲ್ಲಿ ಈ ಪ್ರಕರಣವನ್ನು ಮುಚ್ಚಿಹಾಕುವ ನಿಮ್ಮ ಹುನ್ನಾರ ಫಲಿಸುವುದಿಲ್ಲ. ಸತ್ಯ ಹೊರಬರುವರೆಗೂ, ದಲಿತರ ದುಡ್ಡು ತಿಂದ ತಿಮಿಂಗಿಲಗಳಿಗೆ ಶಿಕ್ಷೆ ಆಗುವವರೆಗೂ ನಾವು ಸುಮ್ಮನಿರುವುದಿಲ್ಲ” ಎಂದು ಕಿಡಿಕಾರಿದರು.
“4,000 ಕೋಟಿ ರೂ. ಮೌಲ್ಯದ ಮುಡಾ ಭೂಹಗರಣ ತಮ್ಮ ಕುತ್ತಿಗೆಗೆ ಬರುತ್ತಿದ್ದಂತೆ ಗಲಿಬಿಲಿಗೊಂಡಿರುವ ಸಿದ್ದರಾಮಯ್ಯ, ಹೇಗಾದರೂ ಮಾಡಿ ಸಾಕ್ಷಿ ನಾಶ ಮಾಡಬೇಕು ಎಂಬ ಸಂಚು ಹೂಡಿ ಕಡತಗಳನ್ನು ನಾಶ ಮಾಡಲು ಹೊರಟಿದ್ದಾರೆ. ಸಿಎಂ ಅವರೇ ತಮ್ಮ ಡೋಂಗಿ ಸಮಾಜವಾದಿ ಮುಖವಾಡ ಕಳಚಿ ಬಿದ್ದಿದೆ. ತಮ್ಮ ಭ್ರಷ್ಟಾಚಾರದ ಕರ್ಮಕಾಂಡ ಬಟಾ ಬಯಲಾಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಕಡತಗಳನ್ನು ನಾಶ ಮಾಡಬಹುದು. ಆದರೆ ಸತ್ಯವನ್ನು ಎಂದಿಗೂ ನಾಶಗೊಳಿಸಲು ಸಾಧ್ಯವಿಲ್ಲ. ನೆನಪಿಡಿ” ಎಂದು ಆಕ್ರೋಶ ಹೊರಹಾಕಿದ್ದಾರೆ.
ಸುದೀಪ್​ ಚಿತ್ರದಲ್ಲಿ ಚಾನ್ಸ್ ಕೇಳಿದ್ರಾ ನಟ ದರ್ಶನ್​? ಶಾಕಿಂಗ್ ಆಗಿದೆ ‘ಹುಚ್ಚ’ ನಿರ್ಮಾಪಕರು ಕೊಟ್ಟ ಪ್ರತಿಕ್ರಿಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − three =
Remember me
