ಬೆಂಗಳೂರು:ಇತ್ತೀಚೆಗಷ್ಟೇ ನಡೆದ ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ವಿಪಕ್ಷ ನಾಯಕ ಆರ್​. ಅಶೋಕ, “ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎಂಬಂತೆ ಕೆಪಿಎಸ್ಸಿ ಪ್ರಶ್ನೆಪತ್ರಿಕೆಯ ತುಂಬಾ ಕಣ್ಣಿಗೆ ಕುಕ್ಕುವ ಹಾಗೆ ಕಾಣುತ್ತಿರುವ ಲೋಪದೋಷಗಳು ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಈಗಾಗಲೇ ಹರಿದಾಡುತ್ತಿದ್ದರೂ, ದೋಷಗಳಿಗೆ, ಭಾಷಾಂತರ ತಪ್ಪುಗಳಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಹೊರಡಿಸಿರುವ ಪ್ರಕಟಣೆ ಅತ್ಯಂತ ಹಾಸ್ಯಾಸ್ಪದ ಮತ್ತು ಅಸಂಬದ್ಧವಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅಸ್ತಿತ್ವದಲ್ಲಿರುವ ಕಾನೂನುಗಳು ಸಾಕಷ್ಟು ಪ್ರಬಲವಾಗಿವೆ, ಅದನ್ನೇ ಜಾರಿ ಮಾಡಿ; ಪಶ್ಚಿಮ ಬಂಗಾಳ ಸಿಎಂಗೆ ಕೇಂದ್ರ ಪತ್ರ
“ಪ್ರಶ್ನೆ ಪತ್ರಿಕೆ ತಯಾರಾದ ನಂತರ ನುರಿತ ಸಂಪನ್ಮೂಲ ವ್ಯಕ್ತಿಗಳ ಕೈಯಲ್ಲಿ ಪ್ರೂಫ್​ ರೀಡ್​ ಮಾಡಿಸಿ, ಪ್ರಶ್ನೆಗಳ ರಚನೆ, ನಿಖರತೆ, ತರ್ಜುಮೆ ಮುಂತಾದವುಗಳಲ್ಲಿ ಯಾವುದಾದರೂ ಲೋಪದೋಷಗಳು ಇದ್ದಲ್ಲಿ ಅದನ್ನು ತಿದ್ದುಪಡಿ ಮಾಡಿದ ನಂತರವೇ ಪ್ರಶ್ನೆ ಪತ್ರಿಕೆ ಅಂತಿಮಗೊಳಿಸಿ ಪರೀಕ್ಷೆ ನಡೆಸಿದ್ದರೆ ಇವತ್ತು ಇಡೀ ವ್ಯವಸ್ಥೆ ನಗೆಪಾಟಲಿಗೀಡಾಗುವ ಪರಿಸ್ಥಿತಿ ಬರುತ್ತಿರಲಿಲ್ಲ. ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಉಂಟಾಗಿರುವ ಲೋಪದೋಷಗಳ ಬಗ್ಗೆ ಈಗಾಗಲೇ ಬಹಿರಂಗ ಚರ್ಚೆಯಾಗುತ್ತಿರುವಾಗ ಆಕ್ಷೇಪಣೆ ಸಲ್ಲಿಸಬೇಕು ಎಂದು ಪ್ರಕಟಣೆ ಹೊರಡಿಸಿರುವುದು ಆಯೋಗ ಎಷ್ಟು ಅಸಮರ್ಥವಾಗಿದೆ ಎಂಬುದನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ” ಎಂದರು.
“ಪ್ರಶ್ನೆಪತ್ರಿಕೆ ಸಿದ್ಧಪಡಿಸಲು ಜವಾಬ್ದಾರರಾದ ಅಧಿಕಾರಿಗಳನ್ನು ಈ ಕೊಡಲೇ ಅಮಾನತ್ತು ಮಾಡಿ ತನಿಖೆಗೆ ಆದೇಶ ನೀಡಬೇಕು. ಸುದ್ಧಿಗೋಷ್ಠಿ ನಡೆಸಿ ಪರೀಕ್ಷಾರ್ಥಿಗಳಿಗೆ ಸ್ಪಷ್ಟನೆ ನೀಡಿ, ಮುಂದಿನ ನಡೆಯ ಬಗ್ಗೆ ಮಾಹಿತಿ ನೀಡಬೇಕು. ಕೆಪಿಎಸ್ಸಿ ವ್ಯವಸ್ಥೆಗೆ ಆಮೂಲಾಗ್ರ ಸುಧಾರಣೆ ತರುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ.
14 ತಿಂಗಳು ಕಿಡ್ನ್ಯಾಪರ್​ ಜತೆಗಿತ್ತು 2 ವರ್ಷದ ಕೂಸು! ಅರೆಸ್ಟ್​ ಆದ್ರೂ ತಾಯಿ ಬಳಿ ಹೋಗದೆ ಆತನನ್ನೇ ತಬ್ಬಿಡಿದು ಕಣ್ಣೀರು

ಐಪಿಎಲ್ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಉಳಿಸಿಕೊಳ್ಳಲ್ಲ RCB! ಅದಕ್ಕೆ ಈ ಮೂರು ಅಂಶಗಳೇ ಕಾರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
