ಬೆಂಗಳೂರು:ಈಗಾಗಲೇ ರಾಜ್ಯ ಸರ್ಕಾರ ಆಗಸ್ಟ್ 27ರಂದು ನಿಗದಿಪಡಿಸಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ವಿದ್ಯಾರ್ಥಿಗಳ ಸಂಘ ಪ್ರತಿಭಟನೆ ನಡೆಸುತ್ತಿದ್ದು, ಎಕ್ಸಾಂ ಮುಂದೂಡಿ ಅಥವಾ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಆಕಾಂಕ್ಷಿಯೊಬ್ಬರು ಹೇಳಿದ್ದಾರೆ. ಆದ್ರೆ, ಸದ್ಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಿಳಿಸಿದೆ. ಇನ್ನು ಈ ವಿಷಯಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್​. ಅಶೋಕ, ಸರಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ.
ಇದನ್ನೂ ಓದಿ:ನಟೋರಿಯಸ್‌ ರೌಡಿಗಳ ಜತೆ ದರ್ಶನ್​! ಪರಪ್ಪನ ಅಗ್ರಹಾರ ಜೈಲಿನಿಂದ ದಾಸನ ಫೋಟೋ ಲೀಕ್ ಆಗಿದ್ದು ಹೇಗೆ?
“ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟವನ್ನು ರಾಜ್ಯ ಕಾಂಗ್ರೆಸ್​ ಸರ್ಕಾರ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಬಂಧಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ” ಎಂದರು.
“ಸರ್ಕಾರದ ಪ್ರತಿನಿಧಿಗಳು ಈ ಕೂಡಲೇ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮನವೊಲಿಸಬೇಕು. ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿ ವಿಶ್ವಾಸ ತುಂಬಬೇಕು” ಎಂದರು.
ಮನೆಗೆ ಹೋದ್ರೂ ಬಾಸ್​ ಕಾಟ ತಪ್ತಿಲ್ವಾ? ಇಲ್ಲಿನ ಉದ್ಯೋಗಿಗಳಿಗೆ ಸೂಪರ್​​ ಪವರ್​ ಕೊಟ್ಟಿದೆ ಈ ದೇಶ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
