ಬಾಗಲಕೋಟೆ:ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನದ್ದು ಎನ್ನಲಾದ ಕಾರು ಡಿಕ್ಕಿಯಾಗಿ ಬೈಕ್​ನಲ್ಲಿದ್ದ ರೈತ ಮೃತಪಟ್ಟಿರುವ ಘಟನೆ ನಡೆದಿದೆ.
ಹುನಗುಂದ ತಾಲ್ಲೂಕಿನ ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಜನರು ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.
ಅಪಘಾತದ ನಂತರ ತಮ್ಮ ವಾಹನದ ನಂಬರ್ ಜಖಂಗೊಳಿಸಿ ಲಕ್ಷ್ಮಣ ಸವದಿ ಪುತ್ರ ಮತ್ತೊಂದು ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಸ್ಥಳೀಯರು ಅವರನ್ನು ಹಿಡಿದು ಕೂರಿಸಿದ್ದಾರೆ. ನಂತರ ಪೊಲೀಸರು ಆಗಮಿಸಿದ್ದಾರೆ. ಡಿಸಿಎಂ ಪುತ್ರನ ಬದಲು ಕಾರು ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆನ್ನಲಾಗಿದೆ.
ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕುಮಾರೇಶ್ವರ ಖಾಸಗಿ ಆಸ್ಪತ್ರೆ ಶವಗಾರಕ್ಕೆ ಪೊಲೀಸರು ರವಾನಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಒಲಿಂಪಿಕ್ಸ್ ಪದಕದ ಮೇಲೆ ಮಾನಾ ಕಣ್ಣು..

ಮುಟ್ಟಿನ ಮೇಲೂ ಕರೊನಾ ಎಫೆಕ್ಟ್!; ಕರೊನಾ ಸಮಯದಲ್ಲೇಕೆ ಋತುಸ್ರಾವ ಬದಲಾವಣೆ?

ಭಾರತಕ್ಕೆ ಮಗ್ಗುಲ ಮುಳ್ಳಾಗಿರುವ ಚೀನಾದಿಂದ ಅಣ್ವಸ್ತ್ರ ಬಲ ಹೆಚ್ಚಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 18 =
Remember me
