ಬಾಗಲಕೋಟೆ:ಕಿರುಕುಳ ತಾಳಲಾರದೇ ವಿಕಲಾಂಗ ಯುವತಿಯೊಬ್ಬಳು ಪಂಚಾಯಿತಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಳೇದಗುಡ್ಡ ತಾಲೂಕು ಹಳದೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ಅನ್ನಪೂರ್ಣ ಪಾದಗಟ್ಟಿ(30) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಪಂಚಾಯಿತಿಯಲ್ಲಿ ಕಂಪ್ಯೂಟರ್​ ಆಪರೇಟರ್​ ಆಗಿ ಕೆಲಸ ಮಾಡುತ್ತಿದ್ದಳು. ಓರ್ವ ಪಂಚಾಯಿತಿ ಸದಸ್ಯ ಸೇರಿ ಗ್ರಾಮದ ಕೆಲ ಯುವಕರ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಪಂಚಾಯಿತಿಯಲ್ಲಿ ಏನೇ ನಡೆದರೂ ಗ್ರಾಮದ ಕೆಲ ಯುವಕರು ಯುವತಿ ಮೇಲೆಯೇ ದೂರು ನೀಡುತ್ತಿದ್ದರು ಎಂದು ಹೇಳಲಾಗಿದೆ. ಹಳದೂರು ಗ್ರಾಪಂ ವ್ಯಾಪ್ತಿಗೆ ಬರುವ ಅಲ್ಲೂರ ಎಸ್ಕೆ ಗ್ರಾಮದ ಒಂದು ಗುಂಪಿನ ಯುವಕರು ಅನ್ನಪೂರ್ಣಗೆ ನಿರಂತರ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ.
ನರೇಗಾದಲ್ಲಿ ಭ್ರಷ್ಟಾಚಾರ ಮಾಡಲಾಗಿದೆ ಎಂದು ಅನ್ನಪೂರ್ಣ ಮೇಲೆ ಆರೋಪ ಮಾಡಲಾಗಿತ್ತು. ಪ್ರಕರಣದ ತನಿಖೆಗಾಗಿ ತಾಲೂಕು ಪಂಚಾಯಿತಿ ಅಧಿಕಾರಿಗಳ ತಂಡವೂ ಬಂದಿತ್ತು. ಇದಾದ ಬಳಿಕ ಸುಖಾ ಸುಮ್ಮನೆ ತನ್ನ ಮೇಲೆ ಆರೋಪ ಮಾಡ್ತಿದ್ದಾರೆಂದು ಬೇಸತ್ತ ಯುವತಿ ಪಂಚಾಯಿತಿ ಕಚೇರಿಯಲ್ಲಿ ವಿಷಸೇವನೆ ಮಾಡಿದ್ದಾಳೆ.
ಅಸ್ವಸ್ಥಗೊಂಡಿದ್ದ ಯುವತಿಗೆ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅನ್ನಪೂರ್ಣ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಕೂಡಲೇ ಜಿಲ್ಲಾ ಆಸ್ಪತ್ರೆಗೆ ಕುಟುಂಬಸ್ಥರು ಹಾಗೂ ಜಿಲ್ಲೆಯ ವಿವಿಧ ಪಂಚಾಯಿತಿಗಳ ಕಂಪ್ಯೂಟರ್ ಆಪರೇಟರ್​ಗಳು ಧಾವಿಸಿ ಬಂದರು. ಕಿರುಕುಳ ನೀಡಿದ ಆರೋಪಿಗಳನ್ನು ಬಂಧಿಸುವವರೆಗೂ ಶವ ತೆಗೆದುಕೊಂಡ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ಅನ್ನಪೂರ್ಣ ಶವ ಜಿಲ್ಲಾ ಆಸ್ಪತ್ರೆಯ ಶವಗಾರದಲ್ಲಿದೆ.
ವಿವಿಧ ಪಂಚಾಯಿತಿ ನೌಕರರು ತಡರಾತ್ರಿವರೆಗೂ ಆಸ್ಪತ್ರೆಯ ಆವರಣದಲ್ಲಿ ಇದ್ದರು. ಗುಳೇದಗುಡ್ಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಗುಳೇದಗುಡ್ಡ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರು ಹಾಗೂ ಪಂಚಾಯಿತಿ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ವಿವಿಧ ಪಂಚಾಯಿತಿಗಳಲ್ಲಿ ಹೀಗೆ ಹೊರಗಿನವರಿಂದ ಕಿರುಕುಳ ಇದೆ ಎಂದು ಪಂಚಾಯಿತಿಗಳ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿರಿಯ ಅಧಿಕಾರಿಗಳಿಂದ ನಮಗೆ ಕಿರುಕುಳ ಇಲ್ಲ. ಆದ್ರೆ, ಸಾರ್ವಜನಿಕ ವಲಯದಲ್ಲಿ ಕೆಲವರು ಸುಖಾಸುಮ್ಮನೆ ಕಿರುಕುಳ ಕೊಡ್ತಾರೆ. ಮಾನಸಿಕ ಹಿಂಸೆ ಕೊಡ್ತಾರೆ. ಇದರಿಂದ ಕರ್ತವ್ಯ ನಿರ್ವಹಿಸುವುದು ಕಷ್ಟ ಆಗ್ತಿದೆ ಎಂದು ಪಂಚಾಯಿತಿ ಸಿಬ್ಬಂದಿ ಆರೋಪಿಸಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದ್ದಾರೆ. ಕಿರುಕುಳ ನೀಡಿದ ಆರೋಪಿಗಳ ಬಂಧನಕ್ಕೆ ಯುವತಿ ಸಂಬಂಧಿಕರು ಒತ್ತಾಯಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಬಾಲಿವುಡ್​ ಬ್ಯೂಟಿ ಅನುಷ್ಕಾ ಶರ್ಮಾ ಬಾಡಿಗಾರ್ಡ್​ ಸಂಬಳ ಕೇಳಿದ್ರೆ ಬೆರಗಾಗುವುದು ಖಂಡಿತ!
ಬಿಜೆಪಿಯಲ್ಲಿ ಆಡಿಯೋ ತಲ್ಲಣ: ಡ್ಯಾಮೇಜ್ ಕಂಟ್ರೋಲ್​ಗೆ ಯತ್ನ, ಬಿಎಸ್​ವೈಗೆ ವ್ಯಾಪಕ ಬೆಂಬಲ..
ಮತ್ತೆ ಬರಲಿದ್ದಾನೆ ಭಜರಂಗಿ ಭಾಯ್​ಜಾನ್​..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
