ಬಾಗಲಕೋಟೆ:ಸಂತಾನಹರಣ ಚಿಕಿತ್ಸೆ ನಡೆದ ಕೆಲವೇ ಗಂಟೆಗಳ ಬಳಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಜಮಖಂಡಿ ನಗರದ ತಾಲೂಕು ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದ ಮಹಿಳೆ ಮೃತಪಟ್ಟಿದ್ದಾಳೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಜಮಖಂಡಿ ತಾಲೂಕಿನ ತುಂಗಳ ಗ್ರಾಮದ ನಿವಾಸಿ ನೀಲವ್ವ ಮಾಯಪ್ಪ ಹೂಗಾರ(25) ಮೃತ ಮಹಿಳೆ. ನಿನ್ನೆ ಆಸ್ಪತ್ರೆಯಲ್ಲಿ ಕ್ಯಾಂಪ್​ನಲ್ಲಿ ಸಂತಾನಹರಣ ಚಿಕಿತ್ಸೆಗೆ ದಾಖಲಾಗಿದ್ದಳು. ಈಗಾಗಲೇ ಮೂರು ಮಕ್ಕಳು ಆಗಿದ್ದರಿಂದ ಸಂತಾನಹರಣ ಚಿಕಿತ್ಸೆಗೆ ನೀಲವ್ವ ಬಂದಿದ್ದಳು.
ಮೂರನೇ ಹೆರಿಗೆ ಆಗಿ ಕೇವಲ ಎರಡು ತಿಂಗಳು ಆಗಿತ್ತು. ಸಂತಾನಹರಣ ಚಿಕಿತ್ಸೆ ಹಿನ್ನೆಲೆಯಲ್ಲಿ ನಿನ್ನೆ ಮಧ್ಯಾಹ್ನ ಇಂಜಕ್ಷನ್ ಕೊಟ್ಟ ಬಳಿಕ ನೀಲವ್ವ ಅಸ್ವಸ್ಥಳಾಗಿದ್ದಳು. ಚೇತರಿಸಿಕೊಳ್ಳಲು ಆಗದೇ ಇಂದು ನಸುಕಿನ ಜಾವ ನೀಲವ್ವ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಇದೀಗ ನೀಲವ್ವಳನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮಹಿಳೆ ಸಾವಿನ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರು ಒತ್ತಾಯ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ನಯನತಾರ ಬಾಡಿಗೆ ತಾಯ್ತನ ಕೇಸ್​ಗೆ ರೋಚಕ ಟ್ವಿಸ್ಟ್​: ಅಧಿಕೃತ ದಾಖಲೆಗಳಿಂದ ಅಸಲಿ ಮದುವೆ ಸಂಗತಿ ಬಯಲು

VIDEO| ಕಾಲಿಂದ ಒದ್ದು, ಬಾಲವನ್ನು ತಿರುಚಿ ಕ್ರೂರವಾಗಿ ನಡೆದುಕೊಂಡ ವ್ಯಕ್ತಿಗೆ ಸರಿಯಾಗಿ ಬುದ್ಧಿ ಕಲಿಸಿದ ಹಸು!

ಹಾಸನದಲ್ಲಿ ತಡರಾತ್ರಿ 9 ಮಂದಿಯನ್ನು ಬಲಿ ಪಡೆದ ಭೀಕರ ರಸ್ತೆ ಅಪಘಾತಕ್ಕೆ ಕಾರಣ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + eighteen =
Remember me
