ಬೆಂಗಳೂರು:ಪ್ರತಿಭಟನೆಯ ಬಿಸಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರೂರಿಗೆ ಬರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂದೇಟು ಹಾಕಿದ್ದು, ಇಂದಿನ ಮೈಸೂರು ಪ್ರವಾಸವನ್ನು ರದ್ದು ಮಾಡಿಕೊಂಡಿದ್ದಾರೆ.
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಸಿಎಂ ಬೊಮ್ಮಾಯಿ ಅವರಿಂದು ಮೈಸೂರು ಜಿಲ್ಲೆಯ ಮೂಗೂರು ದೇವಾಲಯಕ್ಕೆ ಆಗಮಿಸಬೇಕಿತ್ತು. ಆದರೆ, ಮಾಜಿ ಸಿಎಂ ಸಿದ್ದು ಕಾರಿಗೆ ಕೊಡಗಿನ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಹೊಡೆದ ಪರಿಣಾಮ ಎಲ್ಲೆಡೆ ಪ್ರತಿಭಟನೆಯ ಬಿಸಿ ವ್ಯಕ್ತವಾಗುತ್ತಿದೆ. ಕಾಂಗ್ರೆಸ್​ ಕಾರ್ಯಕರ್ತರು ನಿಗಿ ನಿಗಿ ಕೆಂಡವಾಗಿದ್ದಾರೆ.
ಮೈಸೂರು ಜಿಲ್ಲೆಯು ಸಿದ್ದರಾಮಯ್ಯ ಅವರು ತವರೂರು ಆದ ಕಾರಣ, ಸಿಎಂ ಬೊಮ್ಮಾಯಿ ಅವರು ಮೈಸೂರಿಗೆ ಆಗಮಿಸಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ಕಾಂಗ್ರೆಸ್​ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ಅದನ್ನರಿತು ಸಿಎಂ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ.
ಮೈಸೂರು ಬದಲು ಹಾವೇರಿ ಮತ್ತು ಧಾರವಾಡ ಜಿಲ್ಲಾ ಪ್ರವಾಸವನ್ನು ಸಿಎಂ ಬೊಮ್ಮಾಯಿ ಕೈಗೊಂಡಿದ್ದಾರೆ. ನಿನ್ನೆಯಷ್ಟೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್​​ ವಿರುದ್ಧ ಕಪ್ಪು ಪಟ್ಟಿ ತೋರಿಸಲು ಕಾಂಗ್ರೆಸ್​ ಕಾರ್ಯಕರ್ತರು ಮುನ್ನುಗ್ಗಿದ್ದರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಲು ಸಿಎಂ ಬೊಮ್ಮಾಯಿ ಅವರು ಹಿಂದೇಟು ಹಾಕುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಈ ಫೋಟೋದಲ್ಲಿರೋ ಬಾಲಕಿ ಯಾರೆಂದು ಗುರುತಿಸುವಿರಾ? ಇಂದು ದಕ್ಷಿಣ ಭಾರತದ ಸ್ಟಾರ್​ ನಟಿ ಈಕೆ…

ಈವರೆಗೂ ಐದು ಮಂದಿಯನ್ನು ಕೊಂದಿದ್ದೇವೆ… ಮಾಜಿ ಬಿಜೆಪಿ ಶಾಸಕನ ಸ್ಫೋಟಕ ವಿಡಿಯೋ ವೈರಲ್​

ದಕ್ಷಿಣದಲ್ಲೂ ಹೆಚ್ಚುತ್ತಿರುವ ಬಾಲ್ಯ ವಿವಾಹ: ಬಿಗಿ ಕಾನೂನು ರೂಪಿಸಲು ಕೇಂದ್ರಕ್ಕೆ ಪತ್ರ ಅಧಿಕಾರಿಗಳಿಗೆ ಹೊಣೆ ನಿಗದಿಗೆ ಸಲಹೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
