ಬೆಂಗಳೂರು:ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ ಬೊಮ್ಮಾಯಿ‌ ಮೂರನೇ ಬಾರಿ ದೆಹಲಿಗೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದು, ಬುಧವಾರ ಸಂಜೆ ತೆರಳಲಿದ್ದಾರೆ.
ಸುದ್ದಿಗಾರರ ಜತೆಗೆ ಮಂಗಳವಾರ ಮಾತನಾಡಿದ ಅವರು, ಕೇಂದ್ರದ ಆರೋಗ್ಯ, ಹಣಕಾಸು, ರಕ್ಷಣೆ, ಜಲಶಕ್ತಿ ಸಚಿವರನ್ನು ಗುರುವಾರ ಭೇಟಿಯಾಗಿ ಚರ್ಚಿಸಲೆಂದು ಬುಧವಾರ ಸಂಜೆ ದೆಹಲಿಗೆ ಹೊರಟಿರುವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ, ರಾಜಕೀಯ ವಿಷಯ ಸೇರಿದಂತೆ ಖಾಲಿಯಿರುವ ನಾಲ್ಕು ಸ್ಥಾನಗಳ ಭರ್ತಿ ಕುರಿತು ಮಾತುಕತೆ ನಡೆಸುವ ಚಿಂತನೆಯಿದೆ ಎಂದರು.
ಕಾನೂನು ತಂಡದ ಸಭೆಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕಾನೂನು ತಂಡದ ಸಭೆ ನಡೆಸಿ, ಸದ್ಯದ ಬೆಳವಣಿಗೆ ಹಾಗೂ ಮುಂದಿನ ನಡೆಯ ಕುರಿತು ಸಮಾಲೋಚನೆಗೆ ನಿರ್ಧರಿಸಿರುವೆ ಎಂದು ಹೇಳಿದರು.
ನೀರಾವರಿ ಯೋಜನೆಗಳಿಗಾಗಿ ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿರುವ ಪಾದಯಾತ್ರೆ ಬಗ್ಗೆ ಏನನ್ನೂ ಹೇಳಲಾರೆ. ಅವರ ಪಕ್ಷದ ಕಾರ್ಯಕ್ರಮ ರೂಪಿಸುವುದಕ್ಕೆ ಅವರು ಸ್ವತಂತ್ರರು. ಆದರೆ, ರಾಜ್ಯದ ನೆಲ-ಜಲ ವಿಚಾರ ಬಂದಾಗ ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸಿದ ನಿದರ್ಶನಗಳಿದ್ದು, ಮುಂದೆಯೂ ಇದೇ ನಿಲುವು ಮುಂದುವರಿಯಲಿದೆ ಎಂಬ ವಿಶ್ವಾಸವನ್ನು ಬೊಮ್ಮಾಯಿ‌ ವ್ಯಕ್ತಪಡಿಸಿದರು.
ಮಾದಕ ಜಾಲದಲ್ಲಿ ಸ್ಯಾಂಡಲ್​ವುಡ್​ ನಂಟು ಪ್ರಕರಣ: ನಟಿ ರಾಗಿಣಿ, ಸಂಜನಾ ಸೇರಿ ಹಲವರ ಡ್ರಗ್ಸ್ ಸೇವನೆ ಖಚಿತ

ಯೋಧನ ಮೃತದೇಹ ಹಸ್ತಾಂತರಿಸಿ ಹಿಂತಿರುಗುತ್ತಿದ್ದ ಪೊಲೀಸ್​ ಸಿಬ್ಬಂದಿಯ ಪ್ರಾಣ ಹೊತ್ತೊಯ್ದ ಜವರಾಯ..!

ಮೇಡಂ ನಿಮ್ಮನ್ನು ಮದುವೆ ಆಗಲು ಬಯಸಿದ್ದೇನೆ! ನೆಟ್ಟಿಗನ ಪ್ರಪೋಸ್​ಗೆ ನಟಿ ಖುಷ್ಬೂ ಕೊಟ್ಟ ಉತ್ತರ ಹೀಗಿತ್ತು…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 5 =
Remember me
