ಬೆಂಗಳೂರು:ಬಿಬಿಎಂಪಿ ಕಸದ ಲಾರಿಗೆ ನಗರದಲ್ಲಿ ಮತ್ತೊಂದು ಬಲಿಯಾಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಬಿಬಿಎಂಪಿ ಗುರಿಯಾಗಿದೆ.
ಪದ್ಮಿನಿ (40) ಮೃತ ದುರ್ದೈವಿ. ಎಸ್​​ಬಿಐ ಬ್ಯಾಂಕ್ ಉದ್ಯೋಗಿಯಾಗಿದ್ದ ಇವರು, ನಿನ್ನೆ (ಏ.18) ಸಂಜೆ 7 ಗಂಟೆಯ ಸುಮಾರಿನಲ್ಲಿ ಸೇಂಟ್ ಮಾರ್ಕ್ಸ್ ರಸ್ತೆಯಿಂದ ಆರ್.ಆರ್ ನಗರಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಬಿಬಿಎಂಪಿ ಕಸದ ಲಾರಿ ನಂಬರ್ KA-01-AE-2937ರ ಚಾಲಕ ವಾಹನವನ್ನು ನಾಯಂಡಳ್ಳಿ ರಿಂಗ್ ರಸ್ತೆಯಲ್ಲಿ ನಾಗರಬಾವಿ ಕಡೆಯಿಂದ ನಾಯಂಡಹಳ್ಳಿ ಕಡೆಗೆ ಹೋಗಲು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ.
ನಾಯಂಡಹಳ್ಳಿ ರೈಲ್ವೇ ಅಂಡರ್ ಪಾಸ್ ಹತ್ತಿರ ಸ್ಕೂಟರ್ ನಂಬರ್ KA-41-Y-6648ಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಸವಾರಿ ಮಾಡುತ್ತಿದ್ದ ಪದ್ಮಿನಿ ಎಂಬುವರು ವಾಹನ ಸಮೇತ ರಸ್ತೆ ಮೇಲೆ ಬಿದ್ದಿದ್ದಾರೆ. ಇದರ ಬೆನ್ನಲ್ಲೇ ಸೊಂಟದ ಮೇಲೆ ಲಾರಿಯ ಮುಂಭಾಗದ ಎಡಭಾಗದ ಚಕ್ರ ಹರಿದು ಸೊಂಟಕ್ಕೆ ಹಾಗೂ ದೇಹದ ಇತರ ಭಾಗಗಳಿಗೆ ಪೆಟ್ಟಾಗಿದ್ದು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಕಸದ ಲಾರಿಗೆ ಇದು ಮೂರನೇ ಬಲಿಯಾಗಿದೆ. ಹೆಬ್ಬಾಳ ಹಾಗೂ ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ಕಸದ ಲಾರಿ ಹರಿದು ಓರ್ವ ಶಾಲಾ ಬಾಲಕಿ ಹಾಗೂ ವ್ಯಕ್ತಿಯೊಬ್ಬರು ಇದೇ ತಿಂಗಳಿನಲ್ಲಿ ಸಾವಿಗೀಡಾಗಿದ್ದರು. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿದ್ದು, ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕ ಎಸ್ಕೇಪ್​​ ಆಗಿದ್ದಾನೆ. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನರಿಗೆ ಕ್ರಿಪ್ಟೋ ಧೋಖಾ!; ಲಾಭದ ನೆಪದಲ್ಲಿ 40 ಕೋಟಿ ರೂ. ವಂಚನೆ: ನಾಲ್ವರ ಬಂಧನ

ಸ್ಟಾರ್ ಸುವರ್ಣದಲ್ಲಿ ಬರ್ತಿದೆ ರಾಜಿಯ ಕಥೆ; ಇವಳು ಶಾನುಭೋಗ ಮನೆತನದ ಪ್ರೀತಿಯ ಆಸ್ತಿ..

ಭೂಸೇನೆಯ ನೂತನ ಸಾರಥಿಯಾಗಿ ಮನೋಜ್ ಪಾಂಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 4 =
Remember me
