ಬೆಂಗಳೂರು:ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ. ಕಳೆದ ಹದಿನೇಳು ವರ್ಷಗಳ ಹಿಂದೆ ಬಿಡಿಎನಿಂದ ಮಂಜೂರಾದ ನಿವೇಶನವನ್ನು, ವಿವಿಧ ಕಾರಣಗಳನ್ನು ನೀಡಿ ಮಂಜೂರಾತಿ ಮಾಡಿದ ಸಂಸ್ಥೆಯೇ (ಬಿಡಿಎ) ವಾಪಸು ಪಡೆದಿದೆ ಎಂದು ಬಿಡಿಎ ಪರ್ಯಾಯ ನಿವೇಶನ ಮಂಜೂರಾತಿ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟೀಕರಣ ನೀಡಿದ್ದಾರೆ.
ಶನಿವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಮಂಜೂರಾತಿ ಪಡೆದ ನಿವೇಶನಕ್ಕಾಗಿ ಕಳೆದ ಹದಿನೇಳು ವರ್ಷಗಳಲ್ಲಿ ಮೂರು ಬಾರಿ ನೋಂದಣಿ ಸಂಬಂಧ ಶುಲ್ಕ ಪಾವತಿ ಮಾಡಿದ್ದರೂ, ಬಿಡಿಎ ನಿವೇಶನ ಪಡೆದು ಮನೆ ಕಟ್ಟಲು ಸಾಧ್ಯವಾಗಿಲ್ಲ. ಈ ಹಿಂದೆ ಶಾಸಕರೂ ಹಾಗೂ ಸಚಿವರುಗಳಿಗೆ ಬಿಡಿಎ ನಿವೇಶನಗಳನ್ನು ಹಂಚಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್​ನಲ್ಲಿ ಸಲ್ಲಿಸಲಾಗಿತ್ತು. ಅರ್ಜಿಯ ಸಂಬಂಧ ಮಂಜೂರಾತಿ ಪಡೆದ ನಿವೇಶನದ ಕುರಿತು, ಪರಿಶೀಲಿಸಲು, ರಾಜ್ಯ ಹೈಕೋರ್ಟ್ ನೇಮಿಸಿದ್ದ ನ್ಯಾಯಾಧೀಶ ಫಾರೂಖ್ ಸಮಿತಿ ಸಹ ಸ್ತಿರೀಕರಿಸಿದ್ದು, ಬಿಡಿಎ ನಿಯಮಾವಳಿಗಳ ಅನುಸಾರವಾಗಿಯೇ ನನಗೆ ನಿವೇಶನ ಮಂಜೂರಾತಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಬಿಡಿಎಯಿಂದ ನಿವೇಶನ ಮಂಜೂರಾತಿಗಾಗಿ ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಜಿ-ಕೆಟಗರಿ ಅಡಿಯಲ್ಲಿ, ಈ ಹಿಂದೆ ಇತರ ಶಾಸಕರೂ ಹಾಗೂ ಸಚಿವರು ಮಂಜೂರಾತಿ ಪಡೆದ ರೀತಿಯಲ್ಲಿಯೇ ನನಗೂ ಬಿಡಿಎ ನಿವೇಶನ ಮಂಜೂರಾಗಿರುತ್ತದೆ. ಪ್ರಸ್ತುತ ಬದಲಿ ನಿವೇಶನ ಮಂಜೂರು ಮಾಡಲು, ಬಿಡಿಎ, ನಿಗದಿ ಪಡಿಸಿದ ಅಧಿಕ ಶುಲ್ಕವನ್ನೂ ಸಹ ಪಾವತಿಸಿದ್ದೇನೆ ಎಂದರು.
ಈ ಹಿಂದೆ ನೂರಾರು ಮಂದಿ, ಬಿಡಿಎಯಿಂದ ನಿವೇಶನ ಮಂಜೂರಾತಿ ಪಡೆದು, ನೋಂದಣಿ ಶುಲ್ಕ ಕಟ್ಟಿದ್ದರೂ, ನಿವೇಶನವನ್ನು ಪಡೆಯುವುದರಿಂದ ವಂಚಿತರಾಗಿದ್ದರು. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಅವರಿಗೆ, ಬಿಡಿಎ ಪರ್ಯಾಯ ನಿವೇಶನ ನೀಡಿ, ಪರಿಹಾರ ಒದಗಿಸಿದೆ. ನಾನು ಮೂರು ಬಾರಿ ಮಂಜೂರಾದ ನಿವೇಶನಕ್ಕೆ ನೋಂದಣಿ ಮಾಡಿದ್ದರೂ, ನಿವೇಶನದ ಹಕ್ಕು ಪಡೆಯಲು ಇದುವರೆಗೂ ಸಾಧ್ಯವಾಗಿಲ್ಲ. ಬಿಡಿಎಯಿಂದ ನ್ಯಾಯ ಪಡೆಯಲು, ನ್ಯಾಯಾಲಯದ ಮೊರೆ ಹೋಗಲು ಸಹ ನಿರ್ಧರಿಸಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಲೈಗರ್​ ಸಿನಿಮಾ ಸೋಲು: ನಟಿ ಅನಸೂಯ ವಿರುದ್ಧ ಮುಗಿಬಿದ್ದ ವಿಜಯ್​ ದೇವರಕೊಂಡ ಫ್ಯಾನ್ಸ್!

ಜಾರ್ಖಂಡ್​ ರಾಜಕೀಯ ಬಿಕ್ಕಟ್ಟು: ಶಾಸಕರ ಖರೀದಿ ಭೀತಿ, ಸಿಎಂ ಸೊರೆನ್​ ಸೇರಿ ಶಾಸಕರೆಲ್ಲರು ಹೋಟೆಲ್​ಗೆ ಶಿಫ್ಟ್​

ಪತ್ನಿ ಕಾಟ ಸಹಿಸದೇ ತಿಂಗಳಿನಿಂದ ಮರದ ಮೇಲೆ ಪತಿರಾಯ: ಅಕ್ಕ-ಪಕ್ಕದ ಮಹಿಳೆಯರಿಗೆ ಶುರುವಾಯ್ತು ಗ್ರಹಚಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
