ಬೆಳಗಾವಿ:ಮಳೆ ನೀರು ಸೋರದಂತೆ ತಡೆಯಲು ಮನೆಯ ಮಾಳಿಗೆ ಮೇಲೆ ತಗಡಿನ ಶೀಟ್ ಅಳವಡಿಸುವಾಗ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿರುವ ದುರಂತ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಿನ್ನೆ (ಸೆ.05) ಸಂಜೆ ನಡೆದಿದೆ.
ಸುಳಗಾ ನಿವಾಸಿ ವಿನಾಯಕ ಕೃಷ್ಣ ಕಲಖಾಂಬಕರ (25) ಹಾಗೂ ಬೆನಕನಹಳ್ಳಿ ನಿವಾಸಿ ವಿಲಾಸ ಗೋ‍ಪಾಲ ಅಗಸಗೇಕರ (57) ಮೃತ ದುರ್ದೈವಿಗಳು. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಶಾಲೆಯ ಟಾಯ್ಲೆಟ್​ನಲ್ಲಿ ಮಗುವಿಗೆ ಜನ್ಮ ನೀಡಿ 11ನೇ ತರಗತಿ ವಿದ್ಯಾರ್ಥಿನಿ! SSLC ವಿದ್ಯಾರ್ಥಿ ವಿರುದ್ಧ ದೂರು ದಾಖಲು
ರಾಜ್ಯದಲ್ಲಿ ಎಡೆಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿನಾಯಕ ಅವರ ಮನೆ ಸೋರುತ್ತಿತ್ತು. ಛಾವಣಿ ಮೇಲೆ ಹೊಸ ತಗಡುಗಳನ್ನು ಹಾಕಲು ವಿನಾಯಕ ಹಾಗೂ ವಿಲಾಸ ಮನೆಯ ಮೇಲೆ ಹತ್ತಿದ್ದರು. ಈ ವೇಳೆ ಮನೆಯ ಮೇಲೆ ಹಾದು ಹೋದ ವಿದ್ಯುತ್‌ ತಂತಿಗೆ ತಗಡು ಸಿಲುಕಿಕೊಂಡು, ವಿದ್ಯುತ್‌ ಪ್ರವಹಿಸಿ, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಬ್ಬರ ನೆರವಿಗೆ ಬಂದಿದ್ದ ಇನ್ನೊಬ್ಬ ವ್ಯಕ್ತಿಗೂ ವಿದ್ಯುತ್​ ತಂತಿ ತಗುಲಿದೆ. ಈ ವೇಳೆ‌ ಕೆಳಗೆ ಬಿದ್ದು ಆತನಿಗೆ ಗಾಯಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ‌‌ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿ ‌ಗ್ರಾಮೀಣ‌ ಪೊಲೀಸ್ ‌ಠಾಣೆಯ ವ್ಯಾಪ್ತಿಯಲ್ಲಿ ಈಘಟನೆ ನಡೆದಿದೆ.(ದಿಗ್ವಿಜಯ ನ್ಯೂಸ್​)
ಶಾಲೆಯ ಟಾಯ್ಲೆಟ್​ನಲ್ಲಿ ಮಗುವಿಗೆ ಜನ್ಮ ನೀಡಿದ 11ನೇ ತರಗತಿ ವಿದ್ಯಾರ್ಥಿನಿ! SSLC ವಿದ್ಯಾರ್ಥಿ ವಿರುದ್ಧ ದೂರು ದಾಖಲು

ನೋಂದಣಿ ಸಮಸ್ಯೆಗೆ ಕಾವೇರಿ-2 ಪರಿಹಾರ: ರಾಜ್ಯಾದ್ಯಂತ ವಿಸ್ತರಣೆ; ನ.1ಕ್ಕೆ ಲೋಕಾರ್ಪಣೆ

ಸ್ಕೂಟರ್​ ಬೀಳುವಾಗ ಸಹಾಯಕ್ಕೆಂದು ವಿದ್ಯುತ್​ ಕಂಬ ಹಿಡಿದ ಯುವತಿ ಸಾವು: ಬೆಸ್ಕಾಂ, ಬಿಬಿಎಂಪಿ ವಿರುದ್ಧ ಆಕ್ರೋಶ

ಶಾಂತಿ ಕದಡಲು ಹರ್ಷನ ಹತ್ಯೆ: ಎನ್​ಐಎಯಿಂದ ಕೋರ್ಟ್​ಗೆ ಸಾವಿರ ಪುಟಗಳ ಆರೋಪಪಟ್ಟಿ ಸಲ್ಲಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
