ಬೆಳಗಾವಿ:ಕುಂದಾ ನಗರಿ ಬೆಳಗಾವಿಯ ಜಿಲ್ಲಾಧಿಕಾರಿ ಅಧಿಕೃತ ನಿವಾಸದ ಹಿಂದಿರುವ ಕ್ವಾರ್ಟರ್ಸ್​ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಎದುರಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ವಿಶ್ವೇಶ್ವರಯ್ಯ ನಗರದಲ್ಲಿ ನಿನ್ನೆ (ಆ.5) ಸಂಜೆ ಚಿರತೆ ಕಾಣಿಸಿಕೊಂಡಿತು. ಅಲ್ಲದೆ, ಜಾಧವ್​ ನಗರದಲ್ಲೂ ಪ್ರತ್ಯಕ್ಷವಾದ್ದರಿಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಎರಡೂ ಕಡೆ ಬೋನು ಅಳವಡಿಸಿದೆ. ಇದರ ಜೊತೆಗೆ ಮನೆಯಿಂದ ಯಾರು ಹೊರ ಬರದಂತೆ ಮೈಕ್ ನಲ್ಲಿ ಪೊಲೀಸರು ಘೋಷಣೆ ಕೂಗಿದ್ದಾರೆ.
ನಿನ್ನೆ ಮಧ್ಯಾಹ್ನ ಕಾಣಿಸಿಕೊಂಡ ಸ್ಥಳದಿಂದ ಒಂದು ಕಿಮೀ ದೂರದಲ್ಲಿ‌ ಮತ್ತೆ ಸಂಜೆ ಚಿರತೆ ಕಾಣಿಸಿಕೊಂಡಿದ್ದು, ಇದೀಗ ಎರಡು ಏರಿಯಾದ ಜನರಲ್ಲಿ ಆತಂಕ ಹುಟ್ಟಿಕೊಂಡಿದೆ. ಜಾಧವ್ ನಗರ, ಕ್ಯಾಂಪ್ ಪ್ರದೇಶ, ವಿಶ್ವೇಶ್ವರಯ್ಯ ನಗರ ಹಾಗೂ ಹನುಮಾನ್ ನಗರದ ಜನ ಹೊರ ಬಾರದಂತೆ ಎಚ್ಚರಿಕೆ ನೀಡಲಾಗಿದೆ.
ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಯಾರು ಓಡಾಡದಂತೆ ನಗರ ಪೊಲೀಸ್ ಆಯುಕ್ತರಾದ ಡಾ.ಬೋರಲಿಂಗಯ್ಯ ಪ್ರಕಟಣೆ ಹೊರಡಿಸಿದ್ದಾರೆ. ಬೆಳಗಿನ ಜಾವ ವಾಯು ವಿಹಾರ ಮಾಡಬಾರದು‌ ಅಂತಾನೂ ಸೂಚನೆ ನೀಡಿದ್ದಾರೆ. ಚಿರತೆ ಕಂಡರೆ ಅಥವಾ ಮನೆಯ ಸಿಸಿಟಿವಿ ಕ್ಯಾಮರಾಮದಲ್ಲಿ ಚಿರತೆ ಓಡಾಟ ಸೆರೆಯಾದ್ರೆ ತಕ್ಷಣ ತಿಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)
ಮಗ ನಾಪತ್ತೆ ಎಂದು ದೂರು: ತನಿಖೆ ವೇಳೆ ಮಲತಾಯಿಯ ಅನೈತಿಕ ಸಂಬಂಧ, ಭಯಾನಕ ಸಂಚು ಬಯಲು
ವಿವಾದವನ್ನೇ ಬಂಡವಾಳ ಮಾಡಿಕೊಂಡ್ರಾ ಪವಿತ್ರಾ ಲೋಕೇಶ್​? ಟಾಲಿವುಡ್​ನಲ್ಲಿ ಹೀಗೊಂದು ಬಿಸಿ ಬಿಸಿ ಚರ್ಚೆ!
VIDEO| ಪ್ರಧಾನಿ ಮೋದಿ, ಬಿಜೆಪಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿರುವ TRS ಪಕ್ಷದ ಈ ಸಾಂಗ್ ವೈರಲ್ ಆಗ್ತಿದೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
