ಬೆಂಗಳೂರು:ಚಾಮರಾಜಪೇಟೆ ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್ ಖಾನ್​​ ಅವರಿಗೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಶಾಕ್​ ನೀಡಿದ್ದಾರೆ.
ಇಂದು (ಜುಲೈ 5) ಬೆಳಗ್ಗೆ ಜಮೀರ್ ಅವರ ಮನೆ ಮೇಲೆ 40ಕ್ಕೂ ಅಧಿಕ ಎಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿದೆ. ಜಮೀರ್​ ಅಹ್ಮದ್​ ಅವರಿಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಎಲ್ಲೆಲ್ಲಿ ದಾಳಿ1) ಫ್ರೆಜರ್​ ಟೌನ್​ನಲ್ಲಿರುವ ಜಮೀರ್ ಆಹಮದ್ ಮನೆ ಮೇಲೆ ದಾಳಿ2) ಸಿಲ್ವರ್ ಓಕ್ ಅಪಾರ್ಟ್ಮೆಂಟ್ ಮೇಲೆ ದಾಳಿ3) ಸದಾಶಿವ ನಗರದ ಗೆಸ್ಟ್ ಹೌಸ್ ಮೇಲೆ ದಾಳಿ4) ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ ದಾಳಿ5) ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಮೇಲೆ ದಾಳಿ
ಕಳೆದ ಆಗಸ್ಟ್​ನಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಜಮೀರ್ ನಿವಾಸ, ಕಚೇರಿ ಮತ್ತು ಫ್ಲ್ಯಾಟ್‌ ಮೇಲೆ ದಾಳಿ ಮಾಡಿದ್ದರು. ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್ ಖಾನ್​ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಬಗ್ಗೆ ಆದಾಯ ತೆರಿಗೆ ಇಲಾಖೆ ಅನಾಮಧೇಯ ಮೂಲಗಳಿಂದ ಮಾಹಿತಿ ಸಂಗ್ರಹ ಮಾಡಿತ್ತು. ಜಮೀರ್​​ ಕಳೆದ ಹಣಕಾಸು ವರ್ಷದಲ್ಲಿ ಘೋಷಿಸಿಕೊಂಡ ಆಸ್ತಿಗಿಂತ ದುಪ್ಪಟ್ಟು ಆಸ್ತಿ ಹೊಂದಿರುವ ಬಗ್ಗೆ ಐಟಿ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಇಡಿ ದಾಳಿ ಮಾಡಿತ್ತು.(ದಿಗ್ವಿಜಯ ನ್ಯೂಸ್​)
ಅಮೆರಿಕ ಸ್ವಾತಂತ್ರ್ಯ ದಿನದ ಪರೇಡ್​ ವೇಳೆ ಗುಂಡಿನ ದಾಳಿ: 6 ಮಂದಿ ದುರ್ಮರಣ, 24 ಮಂದಿ ಸ್ಥಿತಿ ಗಂಭೀರ

ನಾಯಕತ್ವ ಬದಲಾಗಲ್ಲ, ಸಂಪುಟ ವಿಸ್ತರಿಸಲ್ಲ: ಸಿಎಂ-ರಾಜ್ಯಾಧ್ಯಕ್ಷ ಸ್ಥಾನ ಸೇರಿ ಎಲ್ಲವೂ ಯಥಾಸ್ಥಿತಿ..

ಹೋಟೆಲಲ್ಲಿ ಬಲವಂತದ ಟಿಪ್ಸ್ ನಿಷೇಧ

Sign in to your account
Please enter an answer in digits:two + 7 =
Remember me
