ಬೆಂಗಳೂರು:ಬಿಬಿಎಂಪಿ ಕಸದ ಲಾರಿಯು ಬೆಂಗಳೂರಿಗರ ಪಾಲಿಗೆ ಯಮದೂತನಾಗಿದ್ದು, ಅದರ ಅಪಘಾತದಿಂದ ಆಗುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಎಷ್ಟೇ ಕ್ರಮ ವಹಿಸಿದರೂ ಬಿಬಿಎಂಪಿ ಲಾರಿಗೆ ಬಲಿಯಾಗುತ್ತಿರುವ ಸಂಖ್ಯೆ ಏರುತ್ತಲೇ ಇದೆ. ಇದೀಗ ದ್ವಿಚಕ್ರ ವಾಹನ ಸವಾರ ಬಿಬಿಎಂಪಿ ಲಾರಿಗೆ ಬಲಿಯಾಗಿದ್ದಾನೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಸಮೀಪದ ಕತ್ತಿಹೊಸಹಳ್ಳಿ ಬಳಿ ಇಂದು (ಸೆ.04) ಬೆಳಗ್ಗೆ ಘಟನೆ ನಡೆದಿದ್ದು, ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕಸದ ಲಾರಿಯು ಸಹ ಪಲ್ಟಿ ಹೊಡೆದು ರಸ್ತೆ ಪಕ್ಕದಲ್ಲಿ ಬಿದ್ದಿದೆ. ಮಾವಿನಕುಂಟೆ ಮೂಲದ ರಾಜು (30) ಮೃತಪಟ್ಟಿದ್ದು, ಘಟನೆ ಬೆನ್ನಲ್ಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳೀಯರ ಆಕ್ರೋಶಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬರುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ. ಅಧಿಕಾರಿಗಳು ಬಂದು‌ ಮಾತನಾಡುವವರೆಗೂ ಸ್ಥಳದಿಂದ ಶವ ತೆಗೆಯದಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಥಳೀಯರು ಶಾಸಕರ ಬಳಿ ಆಕ್ರೋಶ ಹೊರಹಾಕಿದ್ದಾರೆ. ಶಾಸಕರು ಸಹ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ದೊಡ್ಡಬೆಳವಂಗಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ತನ್ನ 10 ತಿಂಗಳ ಮಗುವನ್ನು ಕೆಳಗಿಟ್ಟು ಕಾಲುವೆಗೆ ಜಿಗಿದು ಮುಳುಗುತ್ತಿದ್ದ ಯುವಕನನ್ನು ರಕ್ಷಿಸಿದ ದಿಟ್ಟ ಮಹಿಳೆ!

ಸಿಎಂ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಬಿಗ್​ ಶಾಕ್!​ 3,500 ಕೋಟಿ ರೂ. ದಂಡ ವಿಧಿಸಿದ ಎನ್​ಜಿಟಿ

ಭಾರತದ ಚೌಕಿ ಮೇಲಿನ ದಾಳಿಗೆ 30 ಸಾವಿರ ರೂ. ಇನಾಮು: ಚಿಕಿತ್ಸೆ ಪಡೆಯುತ್ತಿದ್ದ ಬಂಧಿತ ಉಗ್ರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
