ಬೆಂಗಳೂರು:ಮನೆಯ ಮುಂದೆ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರು ಆರೋಪಿಗಳನ್ನು ಕೆ.ಪಿ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಥಾಮಸ್ ಕೊಲೆಯಾದ ಯುವಕ. ಸೂರ್ಯ ಅಲಿಯಾಸ್​ ಸೂರಿ, ಚಂದನ್, ಪ್ರಮೋದ್, ಯಶವಂತ್, ಚೇತನ್ ಸೇರಿ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಥಾಮಸ್ ಮನೆ ಮುಂದೆ ವ್ಹೀಲಿಂಗ್ ಮಾಡುತ್ತಿದ್ದರು. ಈ ವಿಚಾರವಾಗಿ ಆರೋಪಿ ಸೂರಿ ಗ್ಯಾಂಗ್ ವಿರುದ್ಧ ಥಾಮಸ್​ ಆಕ್ರೋಶ ವ್ಯಕ್ತಪಡಿಸಿದ್ದ.
ಆರೋಪಿ ಗ್ಯಾಂಗ್​ ಕೂಡ ಎರಡು ಬಾರಿ ಥಾಮಸ್​ಗೆ ವಾರ್ನ್ ಮಾಡಿತ್ತು. ನಂತರ ಮತ್ತೆ ವ್ಹೀಲಿಂಗ್ ಹಾವಳಿ ಮುಂದುವರಿಸಿದ್ದರು. ಮತ್ತೆ ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಕಳೆದ ವಾರ ಥಾಮಸ್​ನನ್ನು ಆರೋಪಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.
ಸದ್ಯ ಈ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಉಳಿದ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಕೆ.ಪಿ. ಅಗ್ರಹಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಕಾಲಿವುಡ್​ನ ಖ್ಯಾತ ನಟನ ಜತೆ ಹಸೆಮಣೆ ಏರಲು ಸಜ್ಜಾದ ನಟಿ ನಿಕ್ಕಿ ಗಲ್ರಾನಿ

ಬೆದರಿಕೆ ಕರೆ: ದಿ ಕಾಶ್ಮೀರ್​ ಫೈಲ್ಸ್​ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿಗೆ ‘ವೈ’ ಶ್ರೇಣಿಯ ಭದ್ರತೆ

ಲಕ್ಷ ಲಕ್ಷ ದುಡಿದು ಪತಿಗೆ ನೀಡಿದರೂ ನಿಲ್ಲದ ಹಣದ ದಾಹ: ವೈದ್ಯನ ಕಿರುಕುಳಕ್ಕೆ ವೈದ್ಯೆ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − twelve =
Remember me
