ಬೆಂಗಳೂರು:ನಗರದ ಬೊಮ್ಮನಹಳ್ಳಿ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣ ಇದೀಗ ಕೊಲೆಯಲ್ಲಿ ಅಂತ್ಯವಾಗಿದೆ. ಸುಹಾಸ್ ಎಂಬಾತನನ್ನು ಕೊಲೆ ಮಾಡಿರುವ ಆರೋಪಿಗಳು ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ಬಂದು ಶರಣಾಗಿದ್ದಾರೆ.
ಏ. 9 ರಂದು ಬೊಮ್ಮನಹಳ್ಳಿ ಠಾಣೆಯಲ್ಲಿ ಸುಹಾಸ್ ಕಿಡ್ನಾಪ್ ಆಗಿದ್ದಾನೆಂದು ದೂರು ನೀಡಲಾಗಿತ್ತು. ಯುಗಾದಿ ಹಬ್ಬದ ದಿನ ಆರೋಪಿ ಕಾಂತನ ಆಟೋಗೆ ಸುಹಾಸ್ ಬೈಕ್ ಟಚ್ ಮಾಡಿದ್ದ‌‌‌. ಈ ವಿಚಾರಕ್ಕೆ ಅಂದು ಸುಹಾಸ್​ ಮತ್ತು ಕಾಂತ ಕೈ ಕೈ ಮೀಲಾಯಿಸಿಕೊಂಡಿದ್ದರು. ಅಲ್ಲದೆ, ಅಂದೇ ಸುಹಾಸ್ ಮೇಲೆ ತನ್ನ ಗ್ಯಾಂಗ್​ನಿಂದ ಕಾಂತ ಹಲ್ಲೆ ನಡೆಸಿದ್ದ.
ಈಗಲಾಟೆ ವಿಚಾರ ಠಾಣೆವರೆಗೂ ಹೋಗಿ ಇಬ್ಬರಿಗೂ ಪೊಲೀಸರು ಬುದ್ದಿ ಹೇಳಿ ಕಳುಹಿಸಿದ್ದರು. ಆದ್ರೆ ಅಂದು ಸುಮ್ಮನಾಗಿದ್ದ ಕಾಂತ ಏಪ್ರಿಲ್‌ 9 ರಂದು ಬೇರೆಯವರ ಮೂಲಕ ಸುಹಾಸ್​ ಕರೆಸಿಕೊಂಡು ತನ್ನ ಗ್ಯಾಂಗ್​ ಜತೆ ಸುಹಾಸ್​ನನ್ನು ಕಿಡ್ನಾಪ್ ಮಾಡಿದ್ದ. ಬಳಿಕ ಕೊಲೆ ಮಾಡಿ ಎಲೆಕ್ಟ್ರಾನಿಕ್ ಸಿಟಿಯ ನೀಲಗಿರಿ ತೋಪಿನ ಬಳಿ ಶವ ಎಸೆದಿದ್ದರು.
ಕೊಲೆ ಮಾಡಿದ ಬಳಿಕ ತಿರುಪತಿಗೆ ತೆರಳಿ ವೆಂಕಟೇಶ್ವರ ದೇವಸ್ಥಾನದಲ್ಲಿ ಆರೋಪಿಗಳು ಮುಡಿ ಕೊಟ್ಟಿದ್ದರು. ದೇವಸ್ಥಾನದಿಂದ ಬಂದವರೇ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೋಗಿಯಿಂದ ಬೇರ್ಪಟ್ಟ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಇಂಜಿನ್​: ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ಮಧ್ಯಪ್ರದೇಶದ ಶಿಕ್ಷಣ ಸಚಿವರ ಸೊಸೆ ನೇಣಿಗೆ ಶರಣು: ಸಾವಿನ ಸುತ್ತ ಅನುಮಾನದ ಹುತ್ತ

ಸ್ಟ್ರಾಂಗ್​ರೂಮ್​ನಲ್ಲೇ ಕೈಚಳಕ!; ಸಿಐಡಿ ಕಚೇರಿ ಆವರಣದ ಕೊಠಡಿಯಲ್ಲೇ ಪಿಎಸ್​ಐ ಗೋಲ್ಮಾಲ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + one =
Remember me
