ಬೆಂಗಳೂರು:ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಶಿವಮೊಗ್ಗದ ಮಾಲ್​ವೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ಹಾಕಿದ್ದಕ್ಕೆ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಟಿಪ್ಪು ಸುಲ್ತಾನ್​ ಅವರ ಭಾವಚಿತ್ರ ಹರಿದು ಹಾಕಿದ್ದಾರೆ.
75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್​ ಪಕ್ಷ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಗರದ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವಿರುವ ಫ್ಲೆಕ್ಸ್​ಗಳು ರಾರಾಜಿಸುತ್ತಿವೆ. ಈ ವೇಳೆ ಟಿಪ್ಪು ಸುಲ್ತಾನ್ ಭಾವಚಿತ್ರವಿರುವ ಫೋಟೋವನ್ನು ಕೆಲವರು ಹರಿದುಹಾಕಿದ್ದಾರೆ.
ಕೆಆರ್ ಸರ್ಕಲ್ ಹಾಗೂ ಹಡ್ಸನ್ ಸರ್ಕಲ್ ಎರಡೂ ಕಡೆ ಫ್ಲೆಕ್ಸ್ ಹರಿದುಹಾಕಲಾಗಿದೆ. ಸ್ಥಳಕ್ಕೆ ಅಲಸೂರು ಗೇಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಫ್ಲೆಕ್ಸ್ ಹರಿದಿರುವ ಬ್ಯಾನರ್​ಗಳನ್ನು ತೆರವುಗೊಳಿಸಿದ್ದಾರೆ.
ಡಿಕೆಶಿ ಎಚ್ಚರಿಕೆಕಾಂಗ್ರೆಸ್​ ಪಕ್ಷ ಅಳವಡಿಸಿದ್ದ ಫ್ಲೆಕ್ಸ್​ನಲ್ಲಿ ಟಿಪ್ಪು ಭಾವಚಿತ್ರ ಹರಿದ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಧಾವಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಹಡ್ಸನ್ ಸರ್ಕಲ್ ಮಾತ್ರವಲ್ಲ ಎರಡು ಕಡೆ ಹರಿದು ಹಾಕಿದ್ದಾರೆ. ನಾವು ದೇಶಕ್ಕಾಗಿ ಹೋರಾಡಿದವರ ಚರಿತ್ರೆ ಓದಿದ್ದೇವೆ. ರಾಷ್ಟ್ರಪತಿಯಾಗಿದ್ದ ಕೋವಿಂದ್ ಕೂಡ ಬಂದು ಪಾಠ ಹೇಳಿದ್ದಾರೆ. ಆದರೆ, ಇವತ್ತು ಟಿಪ್ಪು ಸುಲ್ತಾನ್ ಭಾವಚಿತ್ರ ಇರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ನಾನು ಘಟನಾ ಸ್ಥಳಕ್ಕೆ ಬಂದು ನೋಡಿದ್ದೇನೆ. ಪೊಲೀಸರ ಕಾವಲು ನಡುವೆ ಹರಿದು ಹೋಗಿದ್ದಾರೆ. ಪೊಲೀಸರು ಕಾನೂನು ರೀತಿ ಕ್ರಮ ಕೈಗೊಳ್ಳೋದಾಗಿ ಹೇಳಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯದ್ದಾಗಿರುತ್ತದೆ. ನಾವೆಲ್ಲ ಶಾಂತಿಯಿಂದ ಇರೋಣ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದರು.
ನಾವು ಪರಿಶೀಲನೆ ನಡೆಸುತ್ತಿದ್ದೇವೆಟಿಪ್ಪು ಭಾವಚಿತ್ರ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಮಾತನಾಡಿದ್ದು, ಎರಡು ಕಡೆ ಫ್ಲೆಕ್ಸ್ ಭಗ್ನ ಮಾಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸ್ತಿದ್ದೇವೆ. ನಿನ್ನೆ (ಆ.13) ರಾತ್ರಿ 10.30 ನಂತರ ನಡೆದ ಘಟನೆಯಾಗಿದೆ. ಇದಕ್ಕೆ ಸಂಬಂಧ ಪಟ್ಟಂತೆ ದೂರು ದಾಖಲಾಗಿಲ್ಲ. ನಾವು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಪುನೀತ್​ ಕೆರೆಹಳ್ಳಿ ತಂಡದಿಂದ ಕೃತ್ಯರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಹಾಗೂ ಜೊತೆಗಿದ್ದವರಿಂದ ಈ ಕೃತ್ಯ ನಡೆದಿದೆ. ಸುಮಾರು 8 ರಿಂದ 10 ಜನರ ತಂಡ ಬಂದು ಫ್ಲೆಕ್ಸ್​ಗಳನ್ನು ಹರಿದು ಹಾಕಿದ್ದಾರೆ. ಕೃತ್ಯದ ವಿಡಿಯೋವನ್ನು ಪುನೀತ್​ ಅಂಡ್​ ತಂಡ ಸಾಮಾಜಿಕ ಜಾಲತಾಣದಲ್ಲಿ ಲೈವ್ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸಾವರ್ಕರ್ ಭಾವಚಿತ್ರ ವಿರೋಧಿಸಿದ್ದಕ್ಕೆ ಪ್ರತಿಕಾರವಾಗಿ ಕಾಂಗ್ರೆಸ್​ ಪಕ್ಷ ಅಳವಡಿಸಿದ್ದ ಟಿಪ್ಪು ಭಾವಚಿತ್ರದ ಫ್ಲೆಕ್ಸ್​ ಅನ್ನು ಪುನೀತ್ ಕೆರೆಹಳ್ಳಿ ಹರಿದು ಹಾಕಿದ್ದಾರೆ.(ದಿಗ್ವಿಜಯ ನ್ಯೂಸ್​)
ಸಾವರ್ಕರ್ ಭಾವಚಿತ್ರ ಹಾಕಿದ್ದಕ್ಕೆ ಎಸ್​ಡಿಪಿಐ ಕಾರ್ಯಕರ್ತರ ಆಕ್ರೋಶ!

ನಿಮ್ಮ ಪ್ರಕಾರ ಸ್ವಾತಂತ್ರ್ಯ ಎಂದರೇನು? ರ‍್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿ ದೇಶದ ಬಗ್ಗೆ ಡಿಕೆಶಿ ಹೇಳಿದ್ದು ಹೀಗೆ…

ಶಿಕ್ಷಕರಿಗೆ ಹೆಚ್ಚುವರಿ ಕಿರಿಕಿರಿ: ಮರುಹೊಂದಾಣಿಕೆ ಪಟ್ಟಿ; ಪಿಎಸ್​ಟಿ, ಜಿಪಿಟಿ ವೃಂದ ಬಲ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 6 =
Remember me
