ಬೆಂಗಳೂರು:ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಆತಂಕಕಾರಿ ಘಟನೆ ಬಸವೇಶ್ವರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ (ಜೂನ್​ 21) ನಡೆದಿದೆ.
ಶಿವಮಾಧು ಕೊಲೆಯಾದ ಯುವಕ. ಶಿವಮಾಧು ಸ್ನೇಹಿತ ಶಾಂತ ಕುಮಾರ್ ಜೊತೆ ಸೈಬರ್ ಸೆಂಟರ್ ಹೋಗಿದ್ದ. ಇಬ್ಬರು ಕ್ರಿಕೆಟ್ ಆಡಿ ಕುರಬರಹಳ್ಳಿ ಸರ್ಕಲ್​ಗೆ ಬಂದಿದ್ದರು. ಈ ವೇಳೆ ಶಾಂತಕುಮಾರ್ ಜೇಬಿನಿಂದ ಶಿವಮಾಧು 50 ರೂಪಾಯಿ ತೆಗೆದಿದ್ದ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.
ಜಗಳ ತಾರಕಕ್ಕೇರಿದಾಗ ಶಾಂತಕುಮಾರ್​ ತನ್ನ ಜೊತೆ ತಂದಿದ್ದ ಚಾಕುವಿನಿಂದ ಶಿವಮಾಧುವಿಗೆ ಇರಿದು ಎಸ್ಕೇಪ್‌ ಆಗಿದ್ದಾನೆ. ಇತ್ತ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಶಿವಮಾಧುನನ್ನ ಇತರೆ ಸ್ನೇಹಿತರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರೂ ಆಸ್ಪತ್ರೆಗೆ ಹೋಗುವಷ್ಟರಲ್ಲೇ ಆತ ಮೃತಪಟ್ಟಿದ್ದಾನೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರ ನಗರ ಠಾಣಾ ಪೊಲೀಸರು ಆರೋಪಿ ಪತ್ತೆಗೆ ಬಲೆ‌ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಒಮ್ಮೆ ಒಬ್ಬ ದುಷ್ಟ ರಾಜನಿದ್ದನು… ಟ್ವೀಟ್​ ಮಾಡಿದ ಬೆನ್ನಲ್ಲೇ ಡಿಲೀಟ್​ ಮಾಡಿದ್ದೇಕೆ ಅಮೃತಾ ಫಡ್ನವೀಸ್?​

ವಿಶ್ವಪರ್ಯಟನೆಯಲ್ಲಿ ಗಗನಸುಖಿ: ನಮಸ್ಕಾರ ದೇವರು.. ಇದು ಡಾಕ್ಟರ್ ಬ್ರೋ..!

ನಾಗಚೈತನ್ಯ ಲೈಫ್​ನಲ್ಲಿ ಹೊಸ ಹುಡುಗಿ?; ಶೋಭಿತಾ ಜತೆ ಕಾಣಿಸಿಕೊಂಡ ನಾಗ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
