ಬೆಂಗಳೂರು:ಕಾಲೇಜಿನಲ್ಲಿ ಡಿಬಾರ್ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆ.ಬಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭವ್ಯಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಹಿಳಾ ಪಿಜಿಯ 5ನೇ ಮಹಡಿಯಿಂದ ಜಿಗಿದು ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೋರಮಂಗಲದ ಜ್ಯೋತಿನಿವಾಸ್ ಕಾಲೇಜಿನಲ್ಲಿ ಭವ್ಯಾ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದ ಮೇಲೆ ಡಿಬಾರ್ ಮಾಡಲಾಗಿತ್ತು.
ಡಿಬಾರ್​ ಮಾಡಿದ್ದರ ಬಗ್ಗೆ ತನ್ನ ಸಹೋದರಿ ದಿವ್ಯಾಗೆ ಕರೆ ಮಾಡಿ ಭವ್ಯಾ ನೋವು ತೋಡಿಕೊಂಡಿದ್ದಳು. ಡಿಬಾರ್ ಮಾಡಿದ್ದಾರೆ. ನಾನು ಬದುಕುವುದಿಲ್ಲ ಎಂದು ಹೇಳಿಕೊಂಡಿದ್ದಳು. ಕೂಡಲೆ ಈ ವಿಚಾರವನ್ನು ದಿವ್ಯಾ ತನ್ನ ತಂದೆಗೆ ಕರೆ ಮಾಡಿ ತಿಳಿಸಿದ್ದಳು. ಕೂಡಲೇ ಕೋಲಾರದ ಮುಳಬಾಗಿಲಿನಿಂದ ಮಗಳ ಪಿಜಿಯತ್ತ ಪಾಲಕರು ಬರುತ್ತಿದ್ದರು.
ಮುಳಬಾಗಿಲಿನಿಂದ ಪಿಜಿ ಬಳಿ ಬರುತ್ತಿದ್ದಂತೆ ಪೊಲೀಸರಿಂದ ಕರೆ ಬಂದಿದೆ. ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸರು ಕರೆ ಮಾಡಿದ್ದಾರೆ. ಮಗಳ ಸಾವಿನ ಸುದ್ದಿ ತಿಳಿದ ಪಾಲಕರು ಆಘಾತಕ್ಕೀಡಾಗಿದ್ದಾರೆ. ಆತ್ಮಹತ್ಯೆ ಸಂಬಂಧ ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ರಾಧೆ ಶ್ಯಾಮ್​ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ ಜತೆ ಕಿಸ್ಸಿಂಗ್​ ಸೀನ್​: ಅಚ್ಚರಿಯ ಹೇಳಿಕೆ ನೀಡಿದ ನಟ ಪ್ರಭಾಸ್​!

ನಿಮ್ಮಿಂದಲೇ ರಷ್ಯಾಗೆ ಗ್ರೀನ್​ ಸಿಗ್ನಲ್​ ಸಿಕ್ಕಿದ್ದು… ನ್ಯಾಟೋ ವಿರುದ್ಧವೇ ತಿರುಗಿಬಿದ್ದ ಯೂಕ್ರೇನ್​ ಅಧ್ಯಕ್ಷ!

ಯುದ್ಧ ಬೇಡ ಎಂದು ಸಾಮೂಹಿಕ ರಾಜೀನಾಮೆ ನೀಡಿದ ರಷ್ಯಾದ ಟಿವಿ ರೇನ್​ ಚಾನೆಲ್​ ಸಿಬ್ಬಂದಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + six =
Remember me
