ಬೆಂಗಳೂರು:ಬಹುಮಹಡಿ ಕಟ್ಟಡದಿಂದ ಕೆಳಗೆ ಬಿದ್ದು ಉಗಾಂಡ ಮೂಲದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯಿರುವ ಗೀತಂ ಯೂನಿವರ್ಸಿಟಿಯಲ್ಲಿ ನಿನ್ನೆ (ಏ.27) ರಾತ್ರಿ ನಡೆದಿದೆ.
ಹಸೀನಾ (24) ಮೃತ ದುರ್ದೈವಿ. ಗೀತಂ ಯೂನಿವರ್ಸಿಟಿಯ ಮಹಡಿ ಮೇಲಿಂದ ಬಿದ್ದು ಅನುಮಾನಾಸ್ಪಾದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ಹಸೀನಾ, ಗೀತಂ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದಳು. ರಾತ್ರಿ 11 ಗಂಟೆ ಸುಮಾರಿಗೆ 6 ನೇ ಮಹಡಿಯಿಂದ ಮೊದಲ ಮಹಡಿಗೆ ಬಿದ್ದು ಮೃತಪಟ್ಟಿದ್ದಾಳೆ. ಕೆಳಗಡೆ ಬಿದ್ದಾಗ ಇನ್ನೂ ಉಸಿರಾಡುತ್ತಿದ್ದಳು. ಆದರೆ, ಆಸ್ವತ್ರೆಗೆ ಸಾಗಿಸುವ ಮಧ್ಯೆ ಹಸೀನಾ ಕೊನೆಯುಸಿರೆಳೆದಿದ್ದಾಳೆ.
ವಿದ್ಯಾರ್ಥಿಗಳ ಆಕ್ರೋಶಬಹು ಮಹಡಿಯಿಂದ ಬಿದ್ದು ಹಸೀನಾ ಮೃತಪಟ್ಟ ಹಿನ್ನೆಲೆಯಲ್ಲಿ ಗೀತಂ ವಿವಿಯಲ್ಲಿ ವಿದ್ಯಾರ್ಥಿಗಳು ಆಕ್ರೋಶಿತರಾಗಿದ್ದಾರೆ. ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಹೊಡೆದು ಕಾಲೇಜಿನ ಗ್ಲಾಸ್​ಗಳನ್ನು ಪುಡಿ ಪುಡಿ ಮಾಡಿದ್ದಾರೆ. ಕಾಲೇಜು ಮತ್ತು ಹಾಸ್ಟೇಲ್​ನ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಗೀತಂ ಯುನಿವರ್ಸಿಟಿಯಲ್ಲಿ ಮೊಕಂ ಹೂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಆನ್​ಲೈನ್​ನಲ್ಲಿ 1.45 ಕೋಟಿ ರೂ. ವ್ಯವಹಾರ ನಡೆಸಿದ್ದ ಸಾಮಾನ್ಯ ಮಹಿಳೆಯ ಸಾವಿನ ರಹಸ್ಯ ಕೊನೆಗೂ ಬಯಲು

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು?

ಬಿರು ಬಿಸಿಲಿಗೆ ಜನತೆ ಸುಸ್ತು!; ಮುಂದಿನ 3 ದಿನ ತಾಪಮಾನ ಏರಿಕೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − thirteen =
Remember me
