ಬೆಂಗಳೂರು:ಅವಧಿಗೂ ಮೀರಿ ಪಾರ್ಟಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ನಗರದ ಐಷಾರಾಮಿ ಹೋಟೆಲ್​ ಒಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ.
ಮಾರತ್ತಹಳ್ಳಿಯ ಔಟರ್​​ರಿಂಗ್ ರಸ್ತೆಯಲ್ಲಿರುವ ಐಷಾರಾಮಿ ಹೋಟೆಲ್‌ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಅವಧಿಗೂ ಮೀರಿ ಬೆಳಗಿನಜಾವ 3.30ರವರೆಗೂ ಪಾರ್ಟಿ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರ ತಂಡವೊಂದು ದಾಳಿ ಮಾಡಿದೆ.
ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಪಾರ್ಟಿಯನ್ನು ಆಯೋಜಿಸಿರುವುದು ಬೆಳಕಿಗೆ ಬಂದಿದೆ. ಪಾರ್ಟಿಯಲ್ಲಿ ಯುವಕ-ಯುವತಿಯರು ಮತ್ತಿನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ದಾಳಿ ವೇಳೆ 64 ಯುವಕರು ಮತ್ತು 24 ಯುವತಿಯರು ಪತ್ತೆಯಾಗಿದ್ದಾರೆ. ಉತ್ತರ ಭಾರತ ಮೂಲದ ಯುವತಿಯರೇ ಪಾರ್ಟಿಯಲ್ಲಿ ಹೆಚ್ಚು ಪತ್ತೆಯಾಗಿದ್ದಾರೆ.
ಯುವಕರಿಗೆ 400 ರೂಪಾಯಿ ಮತ್ತು ಯುವತಿಯರಿಗೆ 300 ರೂಪಾಯಿ ಪ್ರವೇಶ ಶುಲ್ಕವನ್ನು ಪಾರ್ಟಿ ಆಯೋಜಕ ನಿಗಧಿ ಮಾಡಿದ್ದ. ಇನ್ನು ಪಾರ್ಟಿಯಲ್ಲಿ ಡ್ರಗ್ಸ್ ಬಳಸಿರುವ ಅನುಮಾನವೂ ವ್ಯಕ್ತವಾಗಿದೆ. ಹೋಟೆಲ್​​ನಲ್ಲಿ ಯಾವುದೇ ಡ್ರಗ್ಸ್ ದೊರೆತಿಲ್ಲ. ಆದರೆ, ಪಾರ್ಟಿಯಲ್ಲಿದ್ದವರು ನಶೆಯಲ್ಲಿದ್ದ ಮಾಹಿತಿ ಸಿಕ್ಕಿದೆ.
ಪಾರ್ಟಿಯಲ್ಲಿದ್ದವರನ್ನು ಮೆಡಿಕಲ್ ಚೆಕಪ್‌ ಮಾಡಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಹೋಟೆಲ್‌ನಲ್ಲಿ ಪರಿಶೀಲನೆಯನ್ನು ಸಿಸಿಬಿ ಪೊಲೀಸರು ಮುಂದುವರೆಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿ ಆರ್‌ಸಿಬಿ ; ಇಂದು ಮುಂಬೈ ಇಂಡಿಯನ್ಸ್ ಸವಾಲು

ಆಲಿಯಾ-ರಣ್‌ಬೀರ್ ಮದುವೆ, 4 ದಿನಗಳ ಅದ್ಧೂರಿ ಕಾರ್ಯಕ್ರಮವಾಗಲಿದೆಯೇ? ಇಲ್ಲಿದೆ ವಿವರ

ಹಿಂದಿಯಲ್ಲಿ ಸಂವಹನ ನಡೆಸಿ ಎಂಬ ಅಮಿತ್ ಷಾ ಹೇಳಿಕೆಗೆ ಕನ್ನಡಿಗರು ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 1 =
Remember me
