ಬೆಂಗಳೂರು:ಪುಡಿ ರೌಡಿಗಳ ಅಟ್ಟಹಾಸಕ್ಕೆ ಬೆಚ್ಚಿ ಬಿದ್ದಿರುವ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳು ಆತಂಕದಲ್ಲೇ ದಿನ ದೂಡುತ್ತಿರವ ಪ್ರಕರಣ ಬೆಳಕಿಗೆ ಬಂದಿದೆ.
ಮಟಮಟ ಮಧ್ಯಾಹ್ನವೇ ಪುಡಿ ರೌಡಿಗಳು ಲಾಂಗ್ ಹಿಡಿದು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿದ್ದಾರೆ. ಈ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ವಾಣಿ ವಿದ್ಯಾಸಂಸ್ಥೆ ಬಳಿ ನಡೆದಿದೆ. ಪುಡಿ ರೌಡಿಗಳ ಹಾವಳಿಗೆ ಸ್ಥಳೀಯರ ಸಹ ಬೆಚ್ಚಿಬಿದ್ದಿದ್ದು, ನಗರದ ಕಾನೂನು ಸುವ್ಯವಸ್ಥೆಯ ಮೇಲೆ ಪ್ರಶ್ನೆ ಮಾಡುವಂತಿದೆ.
ಲಾಂಗ್ ಹಿಡಿದು ವಿದ್ಯಾರ್ಥಿಗಳ ಬಳಿ ಪುಡಿ ರೌಡಿಗಳು ‌ಸುಲಿಗೆ ಮಾಡಿದ್ದಾರೆ. ಜೀವ ಉಳಿಸಿಕೊಳ್ಳಲು ಕೆಲವು ವಿದ್ಯಾರ್ಥಿಗಳು ಫ್ಯಾಕ್ಟರಿ ಶೆಡ್​ ಸೇರಿದರೆ, ಅಲ್ಲಿಗೂ ನುಗ್ಗಿದ ರೌಡಿಗಳು ವಿದ್ಯಾರ್ಥಿಗಳನ್ನು ಬೆದರಿಸಿದ್ದಾರೆ. ಒಂದೇ ದಿನ ಮೂರು ಕಡೆ ಸುಲಿಗೆ ಮಾಡಿದ್ದಾರೆ. ರೌಡಿಗಳ ಪುಂಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲಾಂಗ್​ ಹಿಡಿದು ವಿದ್ಯಾರ್ಥಿಗಳನ್ನು ಅಟ್ಟಾಡಿಸಿಕೊಂಡು ಬರುತ್ತಿರುವ ದೃಶ್ಯ ಮತ್ತು ವಿದ್ಯಾರ್ಥಿಗಳು ಹೆದರಿ ಓಡುತ್ತಿರುವ ದೃಶ್ಯ ಸ್ಪಷ್ಟವಾಗಿ ಗೋಚರವಾಗುತ್ತದೆ.
ಘಟನೆ ಬೆನ್ನಲ್ಲೇ ಎಚ್ಚೆತ್ತ ಮಾದನಾಯಕನ ಹಳ್ಳಿ ಪೊಲೀಸರು ಪುಡಿ ರೌಡಿಗಳ ಹೆಡೆಮುರಿ ಕಟ್ಟಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
4 ರಾಜ್ಯಗಳ ಚುನಾವಣಾ ಗೆಲುವೇ ಬಿಜೆಪಿಗೆ ದೊಡ್ಡ ನಷ್ಟವಾಗಲಿದೆ: ಮಮತಾ ಬ್ಯಾನರ್ಜಿ ಕೊಟ್ಟ ವಿವರಣೆ ಹೀಗಿದೆ…

ಪಾಕ್​ ಯುವತಿ ಜತೆ ಮದ್ವೆಯಾದ ಬೆನ್ನಲ್ಲೇ ಆತ್ಮಾಹುತಿ ದಾಳಿ ನಡೆಸಿದ ಕೇರಳದ M.Tech ವಿದ್ಯಾರ್ಥಿ!

ಚಿರಂಜೀವಿ ಜತೆ ಶ್ರುತಿ; ಭೋಲಾ ಶಂಕರ್​ಗೆ ನಾಯಕಿ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nine + eight =
Remember me
