ಬೆಂಗಳೂರು:ಸೈಮಾ ಪ್ರಶಸ್ತಿ ಕಾರ್ಯಕ್ರಮಕ್ಕೆ ಬಂದಿದ್ದ ಕಲಾವಿದರು ಉಳಿದುಕೊಂಡಿದ್ದ ವಿಠಲ್ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯು ಮ್ಯಾರಿಯೇಟ್​ ಹೋಟೆಲ್​ ಮೇಲೆ ಕಬ್ಬನ್​ ಪಾರ್ಕ್​ ಠಾಣಾ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.
ಅವಧಿ ಮೀರಿ ಪಾರ್ಟಿ ಮಾಡಿದ ಆರೋಪದ ಮೇಲೆ ಹೋಟೆಲ್​ನ ಮ್ಯಾನೇಜರ್​ ಹಾಗೂ ಪಾರ್ಟಿ ಆರ್ಗನೈಸರ್​ ವಿರುದ್ಧ ಎಫ್​ಐರ್​ ದಾಖಲಿಸಲಾಗಿದೆ. ಕಳೆದ 12ರಂದು ರಾತ್ರಿ 3 ಗಂಟೆವರೆಗೆ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದೆ. ಕಾನೂನಿನ ಪ್ರಕಾರ ಒಂದು ಗಂಟೆಗೆ ಪಾರ್ಟಿ ಮುಗಿಯಬೇಕಿತ್ತು. ಆದರೆ, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ನಸುಕಿನ ಜಾವ 3.30ರವರೆಗೂ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದೆ. 1 ಗಂಟೆಗೆ ಮುಗಿಸಬೇಕೆಂದು ಸೂಚನೆ ನೀಡಿದ್ದರೂ ಸಹ ಅದಕ್ಕೆ ಕ್ಯಾರೆ ಎನ್ನದೆ ಪಾರ್ಟಿ ನಡೆಸಿರುವ ಆರೋಪವಿದೆ.
ನಗರದಲ್ಲಿ ನಡೆದಿದ್ದ ಸೈಮಾ ಅವಾರ್ಡ್​ ಕಾರ್ಯಕ್ರಮಕ್ಕೆ ಬಂದಿದ್ದ ಸ್ಟಾರ್​ಗಳು ಈ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಹೋಟೆಲ್​ನಲ್ಲಿ ಉಳಿದುಕೊಂಡಿದ್ದ ಸ್ಟಾರ್​ಗಳು ಪಾರ್ಟಿಯಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ಎರಡು ಬಾರಿ ಅವಧಿ ಮೀರಿ ಪಾರ್ಟಿ ಮಾಡಿದ್ದ ಆರೋಪ ಹೋಟೆಲ್​ ಸಿಬ್ಬಂದಿ ಮೇಲಿದೆ. 2 ಬಾರಿಯು ಎಚ್ಚರಿಕೆ ನೀಡಿ ಪೊಲೀಸರು ಬಿಟ್ಟು ಕಳುಹಿಸಿದ್ದರು. ಆದರೆ, ಈಗ ಮತ್ತೊಮ್ಮೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ.
ಸದ್ಯ ಪ್ರಕರಣ ದಾಖಲಾಗಿದ್ದು, ಪಾರ್ಟಿಯಲ್ಲಿ ಏನಾದರೂ ಅಕ್ರಮ ಚಟುವಟಿಕೆ ನಡೆದಿದೆಯಾ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಳೆಹಾಕುತ್ತಿದ್ದು, ತನಿಖೆ ಮುಂದುವರಿದಿದೆ.(ಏಜೆನ್ಸೀಸ್​)
ಅಶ್ಲೀಲ ವಿಡಿಯೋ ಸೋರಿಕೆ: ಖ್ಯಾತ ನಟಿ, ಬಿಗ್​ಬಾಸ್​ ಬ್ಯೂಟಿ ಅಕ್ಷರಾ ಕೊಟ್ಟ ಖಡಕ್​ ಪ್ರತಿಕ್ರಿಯೆ ಹೀಗಿತ್ತು…

ಪ್ರೀತಿಸಿ ಮದ್ವೆಯಾದ ಪತ್ನಿಯನ್ನೇ ಕೊಂದನಾ ಪತಿ? ಆರೋಪ-ಪ್ರತ್ಯಾರೋಪಗಳ ಮಧ್ಯೆ ಅನಾಥವಾದ ಕಂದಮ್ಮ

ತಿರುಪತಿ ತಿಮ್ಮಪ್ಪನ ಸನ್ನಿಧಿಗೆ 1.02 ಕೋಟಿ ರೂಪಾಯಿ ದೇಣಿಗೆ ನೀಡಿದ ಮುಸ್ಲಿಂ ಕುಟುಂಬ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + four =
Remember me
