ಬೀದರ್:ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದ ವಿದ್ಯಾರ್ಥಿಯ ಮನೆಯಲ್ಲಿ ಸಂಭ್ರಮ ಹೆಚ್ಚು ಗಂಟೆಗಳ ಕಾಲ ಉಳಿಯಲ್ಲಿಲ್ಲ. ನೇಣು ಹಾಕ್ಕಿಕೊಂಡ ಸ್ಥಿತಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯ ಶಪ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯೋ? ಅಥವಾ ಕೊಲೆಯೋ? ಎಂಬ ಅನುಮಾನ ಕಾಡಲಾರಂಭಿಸಿದೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮದ ವಿದ್ಯಾರ್ಥಿ ಪ್ರಭು ಸಂಗಮೇಶ (17) ಎನ್ನುವ ವಿದ್ಯಾರ್ಥಿಯ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಿಕ್ಕಿದೆ. ವಿದ್ಯಾರ್ಥಿ ಮುಂಜಾನೆ ತಮ್ಮ ಹೊಲಕ್ಕೆ ಹೋದವ, ಮಧ್ಯಾಹ್ನ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಸಿಕ್ಕಿದೆ.
ಹೊಲದಲ್ಲಿ ಕೆಲಸ ಮಾಡುವ ವೇಳೆ ಶೋಭಾವತಿ(45) ಅವರಿಗೆ ಹಿಂದಿನಿಂದ ಬಂದು ಮುಖಕ್ಕೆ ಬಟ್ಟೆ ಸುತ್ತಿ ಹೊಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಿಗೆ ಹೊಡೆದವರು ಪ್ರಭು ಕೊಲೆ ಮಾಡಿದ್ದಾರಾ? ಅಥವಾ ವಿದ್ಯಾರ್ಥಿಯೇ ಸ್ವಯಂ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನಾ ? ಎಂಬ ಅನುಮಾನ ಸ್ಥಳೀಯರಲ್ಲಿ ಕಾಡುತ್ತಿದೆ. ಇನ್ನು ಗಾಯಗೊಂಡ ಶೋಭಾವತಿ ಬೀದರನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿದ್ಯಾರ್ಥಿ ಪ್ರಭು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಲಿಯುತ್ತಿದ್ದು, ಸೋಮವಾರ ಪ್ರಕಟಗೊಂಡ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶೇ.82ರಷ್ಟು ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದ. ಇದು ಆತ್ಮಹತ್ಯೆ ಅಥವಾ ಕೊಲೆ ಎನ್ನುವುದನ್ನು ಪೊಲೀಸರ ತನಿಖೆಯಿಂದಲೇ ಗೊತ್ತಾಗಲಿದೆ. ಧನ್ನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ನಾನು ಆ ರೀತಿಯ ಹುಡುಗಿಯಲ್ಲ! ಬೋಲ್ಡ್​ ಬ್ಯೂಟಿ ನಿವೇತಾ ಪೆತುರಾಜ್​ ಮುಕ್ತ ಮಾತು

ಪಾವಗಡ ಟು ಬಿಗ್ ಬಾಸ್: ವಿಜಯವಾಣಿ-ದಿಗ್ವಿಜಯ ನ್ಯೂಸ್​ ಕ್ಲಬ್​ಹೌಸ್​ ಸಂವಾದದಲ್ಲಿ ಮಂಜು…

ಟೋಕಿಯೊ ಸಾಧಕರು; ಗೆಲುವಿನ ಮೆಟ್ಟಿಲುಗಳಿವು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 20 =
Remember me
