ಬೆಂಗಳೂರು:ಬಿಜೆಪಿ ನೇತೃತ್ವದ ಸರ್ಕಾರದ ಭ್ರಷ್ಟಾಚಾರವು ನಿಮ್ಮನ್ನೂ ಬಾಧಿಸಿದ್ದರೆ ಮಾಹಿತಿ ನೀಡುವಂತೆ ರಾಜ್ಯ ಕಾಂಗ್ರೆಸ್​ ಸಹಾಯವಾಣಿಯನ್ನು ತೆರೆದಿದೆ.
ಈ ಬಗ್ಗೆ ಕರ್ನಾಟಕ ಕಾಂಗ್ರೆಸ್​ ಕೂ ಮಾಡಿದ್ದು, ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಅಧಿವೇಶನದ ಒಳಗೆ ಹಾಗೂ ಹೊರಗೆ ಸಾರ್ವಜನಿಕವಾಗಿ ಚರ್ಚೆ ನಡೆಸುತ್ತೇವೆ. ಬೆಂಗಳೂರು ನಗರ ಐಟಿ ಕ್ಯಾಪಿಟಲ್, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಖ್ಯಾತಿ ಪಡೆದಿತ್ತು. ಆದರೆ ಈಗ ನಮ್ಮ ರಾಜ್ಯ ದೇಶದ ಭ್ರಷ್ಟಾಚಾರದ ರಾಜಧಾನಿ ಎಂದು ಕುಖ್ಯಾತಿ ಪಡೆಯುತ್ತಿದೆ
–ಕರ್ನಾಟಕ ಕಾಂಗ್ರೆಸ್ (@inckarnataka)14 Sep 2022

ರಾಜ್ಯದಲ್ಲಿರುವ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲೇ ಬೇಕಿದೆ. ಅದಕ್ಕಾಗಿ ಜನಜಾಗೃತಿ ಮೂಡಿಸುತ್ತಿದ್ದು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ನಿಮ್ಮನ್ನೂ ಬಾಧಿಸಿದ್ದರೆ, ನಮ್ಮ ಸಹಾಯವಾಣಿ ಸಂಖ್ಯೆ 8447704040ಗೆ ಕರೆ ಅಥವಾ ವಾಟ್ಸಪ್ ಮಾಡಿ. ಹಾಗೇ 40percentsarkaara.com ವೆಬ್ ಸೈಟ್ ನಲ್ಲಿ ಮಾಹಿತಿ ನೀಡಿ.
–ಕರ್ನಾಟಕ ಕಾಂಗ್ರೆಸ್ (@inckarnataka)14 Sep 2022

ರಾಜ್ಯವನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷದಿಂದ ಜನಜಾಗೃತಿ ಅಭಿಯಾನ ಆರಂಭಿಸಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಂಪೂರ್ಣ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಕಾಂಗ್ರೆಸ್​ ಹೇಳಿದೆ.
–ಕರ್ನಾಟಕ ಕಾಂಗ್ರೆಸ್ (@inckarnataka)14 Sep 2022

ಹಗರಣಗಳ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಎನ್​.ಆರ್​. ರಮೇಶ್ ಆಹ್ವಾನ​

ಆಳವಾದ ಕಮರಿಗೆ ಬಿದ್ದ ಬಸ್​: ಸ್ಥಳದಲ್ಲೇ 9 ಮಂದಿ ದುರ್ಮರಣ, 8 ಪ್ರಯಾಣಿಕರಿಗೆ ಗಂಭೀರ ಗಾಯ

ಎನ್​ಸಿಇಆರ್​ಟಿ ಪ್ರವೇಶ ಪರೀಕ್ಷೆಯಲ್ಲಿ ಬೆಳ್ತಂಗಡಿಯ ದೀಕ್ಷಾಗೆ ಪ್ರಥಮ ಸ್ಥಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + five =
Remember me
