ಬೆಂಗಳೂರು:ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಸೋಮವಾರ ಮಾತನಾಡಿದ ಅವರು, ಬೇರೆಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಇದರಂತೆ ಜೂನ್ 16ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದರಂತೆ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಸಿಇಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕವೇ ನಿಗದಿತ ಶುಲ್ಕ ಸಲ್ಲಿಸಲು ಏ.22ರವರೆಗೆ ಅವಕಾಶವಿದೆ.
ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲೇನಾದರೂ ಮಾಹಿತಿಯನ್ನು ಪರಿಷ್ಕರಿಸುವುದಿದ್ದರೆ ಅಂಥವರಿಗೇ ಮೇ 2ರಿಂದ 6ವರೆಗೆ ಕಾಲಾವಕಾಶ ಇರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವರು ವಿವರಿಸಿದ್ದಾರೆ.
–Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan)28 Mar 2022

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತ: ವಿದ್ಯಾರ್ಥಿನಿ ಸಾವು

ಫೋನ್​ ಆಫ್​ ಮಾಡಿ ಠಾಣೆಯಲ್ಲಿದ್ದ 15 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದ ಇನ್ಸ್​ಪೆಕ್ಟರ್​ಗೆ ಬಿಗ್​ ಶಾಕ್​!​

ಪಬ್ಲಿಕ್​ ಟಾಯ್ಲೆಟ್​ ಅನ್ನೇ ಕದ್ದ ಆಟೋ ಚಾಲಕ! ಮಾರಾಟದ ಮೊತ್ತ ಕೇಳಿದ್ರೆ ಶಾಕ್​ ಆಗ್ತೀರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 12 =
Remember me
