ಚಾಮರಾಜನಗರ:ಕೆಲಸ ಸಿಗದೇ ಜೀವನದಲ್ಲಿ ಜಿಗುಪ್ಸೆ ಹೊಂದಿ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ.
ಮನು(22) ಆತ್ಮಹತ್ಯೆ ಮಾಡಿಕೊಂಡ ಯುವಕ. ಇತ್ತೀಚೆಗೆ ವಿದ್ಯಾಭ್ಯಾಸ ಮುಗಿಸಿದ್ದ ಯುವಕನಿಗೆ ಅಲೆದಾಡಿದರೂ ಯಾವುದೇ ನೌಕರಿ ಸಿಕ್ಕಿರಲಿಲ್ಲ. ಇದರಿಂದ ಆತ ಖಿನ್ನತೆಗೆ ಒಳಗಾಗಿದ್ದ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷ ಸೇವಿಸಿರುವ ಗೊತ್ತಾದ ಬೆನ್ನಲ್ಲೇ ಆತನನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಮೈಮಾಟ ಪ್ರದರ್ಶಿಸಿದ ಮಾತ್ರಕ್ಕೆ ಕೆಟ್ಟ ಸಿನಿಮಾ ಉಳಿಯುವುದಿಲ್ಲ: ದೀಪಿಕಾ ಚಿತ್ರದ ವಿರುದ್ಧ ಕಂಗನಾ ಕೆಂಗಣ್ಣು

ಅಂಗಡಿಯ ಬಾಗಿಲು ಮುಚ್ಚದೇ ಟೀ ಕುಡಿಯಲು ಹೋಗಿದ್ದ ಮಾಲೀಕನಿಗೆ ಕಾದಿತ್ತು ಬಿಗ್​ ಶಾಕ್​!

ಐಪಿಎಲ್​ ಮೆಗಾ ಹರಾಜು 2022: ಎರಡನೇ ದಿನದ ಹರಾಜಿನಲ್ಲಿ ಸೇಲಾದ ಮೊದಲ ಆಟಗಾರ ಈತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
