ಚಿಕ್ಕಬಳ್ಳಾಪುರ:ಮಾನ-ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
ತಾಯಿ ಸರೋಜಮ್ಮ, ತಂದೆ ಶ್ರೀರಾಮಪ್ಪ ಹಾಗೂ ಮಗ ಮನೋಜ್ ಮೃತ ದುರ್ದೈವಿಗಳು. ಹೆತ್ತ ಮಗಳು ಅನ್ಯ ಜಾತಿಯ ಯುವಕನ ಜೊತೆ ಪರಾರಿಯಾಗಿದ್ದಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾರೆ.
26 ವರ್ಷದ ಮಗಳು ಅರ್ಚನಾ, ನಾರಾಯಣಸ್ವಾಮಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆ. ಯುವಕ ಅನ್ಯಜಾತಿಯವನಾಗಿರುವುದರಿಂದ ಊರಿನವರಿಂದ ನಿಂದನೆ ಒಳಗಾಗಬಹುದು ಎಂದು ಹೆದರಿ ಮನೆಯಲ್ಲಿಯೇ ಸಾಮೂಹಿಕವಾಗಿ ವಿಷ ಸೇವಿಸಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಮಧ್ಯಾಹ್ನ 1.30 ರವರೆಗೂ ನಡೆಯಲಿದೆ ಪೂಜಾ ವಿಧಿ-ವಿಧಾನಗಳು

ವಿಶ್ವದ ಅತ್ಯಂತ ಎತ್ತರ ಪ್ರದೇಶದಲ್ಲಿರುವ ಶಿವನ ದೇವಸ್ಥಾನದ ಅದ್ಭುತ ದೃಶ್ಯ: ನಿಮ್ಮ ಹುಬ್ಬೇರಿಸೋ ವಿಡಿಯೋ ಇದು

ನ.11ರಿಂದ ಸಾಹಿತ್ಯ ಸಮ್ಮೇಳನ ಅಸಾಧ್ಯ; ಹಣ ಬಿಡುಗಡೆಯಾಗಿಲ್ಲ, ತಯಾರಿ ನಡೆದಿಲ್ಲ: ಜೋಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
