ಬೆಂಗಳೂರು:ಕರೊನಾ ಪಾಸಿಟಿವಿಟಿ ದರ ಶೇ 5ಕ್ಕಿಂತ ಕಡಿಮೆ ಇರುವ 16 ಜಿಲ್ಲೆಗಳಲ್ಲಿನ ನಿರ್ಬಂಧಗಳಿಗೆ ರಾಜ್ಯ ಸರ್ಕಾರ ಮತ್ತಷ್ಟು ವಿನಾಯಿತಿ ನೀಡಿದ್ದು, ಶೇ. 50ರಷ್ಟು ಆಸನಗಳೊಂದಿಗೆ ರಾಜ್ಯವ್ಯಾಪಿ ಬಸ್​ ಸಂಚಾರಕ್ಕೆ ಅನುಮತಿಯನ್ನು ನೀಡಿದೆ.
ಕರೊನಾ ಅನ್​ಲಾಕ್​ ಸಂಬಂಧ ಇಂದು ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಿದೆ. ಜನರು ಲಾಕ್​ಡೌನ್​ನಿಂದ ಸಮಸ್ಯೆ ಎದುರಿಸುತ್ತಿರುವುದರಿಂದ ಅನುಕೂಲವಾಗಲೆಂದು ಕೆಲವೊಂದು ಸಡಿಲಿಕೆ ಮಾಡಲಾಗಿದೆ. ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಕರೊನಾ ನಿಯಂತ್ರಿಸಲು ಸಹಕರಿಸಿದರೆ, ಅನ್​ಲಾಕ್​ ಯಶಸ್ವಿಯಾಗುತ್ತದೆ ಎಂದು ಸಿಎಂ ಬಿಎಸ್​ವೈ ಮಾಧ್ಯಮಗಳಿಗೆ ತಿಳಿಸಿದರು.
ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.
ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.• ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.• ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.• ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.• ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
• ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.
• ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.
ರಾಜ್ಯವ್ಯಾಪಿ ಅನ್ವಯವಾಗುವಂತೆ:• ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.• ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 3 =
Remember me
