ಬೆಂಗಳೂರು:ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸಿಲಿಂಗ್‌ ಆದೇಶ ಹೊರಡಿಸಲಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ವರ್ಗಾವಣೆ ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕರು (ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಗ್ರಂಥಪಾಲಕರು, ಕ್ರೀಡಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗೆ ಆದೇಶ ಹೊರಡಿಸಲಾಗಿದೆ.
ಮಂಜೂರಾದ ಬೋಧಕರ ಹುದ್ದೆಗಳ ಶೇ 9ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗಳು ಹಾಗೂ ಶೇ 6ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ನಡೆಸಲು ಅವಕಾಶ ಇದೆ.
ವರ್ಗಾವಣೆ ನಿಯಮಗಳಂತೆ ವಿಶೇಷ ಪ್ರಕರಣಗಳಿಗೆ ಅನ್ವಯಿಸುವ ಬೋಧಕರು ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯಗೊಳಿಸುವ ಆನ್‌ಲೈನ್ ನಮೂನೆಯಲ್ಲಿ ನಿಗದಿತ ದಿನಾಂಕದ ಒಳಗೆ ವರ್ಗಾವಣೆ ಅರ್ಜಿ ಸಲ್ಲಿಸಬೇಕು.
ಕೊನೆಯ ದಿನಾಂಕದ ನಂತರ ಸಲ್ಲಿಸುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅಗತ್ಯ ದಾಖಲಾತಿಗಳಿಲ್ಲದ ಮನವಿಗಳನ್ನು ತಿರಸ್ಕರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
–Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan)5 Apr 2022

ಸುಂದರವಾದ ಹೆಣ್ಣುಮಕ್ಕಳ ಅಂಗಾಗಳನ್ನು ಕಿತ್ತು ತಿಂತಾರೆ: ಭಯಾನಕ ಭವಿಷ್ಯ ನುಡಿದ ಕೋಡಿಮಠದ ಶ್ರೀ

ರಾಹುಲ್​ ಗಾಂಧಿ ಹೆಸರಿಗೆ ಫ್ರೀಯಾಗಿ 50 ಲಕ್ಷ ಮೌಲ್ಯದ ಆಸ್ತಿ ಬರೆದು 100 ಗ್ರಾಂ ಚಿನ್ನವನ್ನೂ ಕೊಟ್ಟ ವೃದ್ಧೆ!

ಸಿಎಂ ಅಧಿಕೃತ ನಿವಾಸದ ಭದ್ರತಾ ಸಿಬ್ಬಂದಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 8 =
Remember me
