ಬೆಂಗಳೂರು:ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ಉತ್ತೇಜನ ನೀಡಿ ಉದ್ಯೋಗಗಳ ಸೃಷ್ಟಿಗೆ ಒತ್ತು ನೀಡಿರುವ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಸುಮಾರು 6,825ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸುವ 2,689.51 ಕೋಟಿ ರೂ. ಮೌಲ್ಯದ 81 ಕೈಗಾರಿಕಾ ಯೋಜನೆಗಳಿಗೆ ಗುರುವಾರ ಸಂಜೆ ಅನುಮೋದನೆ ನೀಡಿದೆ.
ಕರ್ನಾಟಕ ಉದ್ಯೋಗಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್. ನಿರಾಣಿ ನೇತೃತ್ವದಲ್ಲಿ ನಡೆದ 132ನೇ ರಾಜ್ಯ ಮಟ್ಟದ ಏಕಗವಾಕ್ಷಿ ತೆರವು ಸಮಿತಿ (ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ) ಸಭೆಯು ಈ ಯೋಜನೆಗಳಿಗೆ ಅನುಮೋದನೆ ನೀಡಿದೆ.
ಸಮಿತಿಯು 50 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ ಯೋಜನೆಗಳನ್ನು ಪರಿಗಣಿಸಿ ಅನುಮೋದನೆ ನೀಡಿದೆ. 1,229.43 ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 1,734 ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಅಲ್ಲದೆ 132ನೇ ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ ಸಭೆಯಲ್ಲಿ 15 ಕೋಟಿ ರೂ.ಗಿಂತ ಹೆಚ್ಚು ಹಾಗೂ 50 ಕೋಟಿ ರೂ.ಗಿಂತ ಕಡಿಮೆ ಹೂಡಿಕೆಯ 71 ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗಿದೆ ಹಾಗೂ 1,308.06 ಕೋಟಿ ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 5,091 ಜನರಿಗೆ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
151.42 ಕೋಟಿ ರೂ. ಹೂಡಿಕೆಯ ಮೂರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 2,689.51 ಕೋಟಿ ರೂ.ಗಳ ಹೂಡಿಕೆಯೊಂದಿಗೆ 6,825 ಜನರಿಗೆ ಉದ್ಯೋಗಾವಕಾಶವಿರುವ ಒಟ್ಟು 81 ಯೋಜನೆಗಳಿಗೆ ಅನುಮತಿ ನೀಡಲಾಗಿದೆ.
ಅನುಮೋದನೆ ನೀಡಿರುವ ಪ್ರಸ್ತಾವನೆಗಳು:* ಪರ್ಪಲ್‍ಸ್ಟಾರ್ ಹೈಜೀನ್ ಪ್ರೈವೇಟ್ ಲಿಮಿಟೆಡ್, ಹೂಡಿಕೆ 270 ಕೋಟಿ ರೂ., ಉದ್ಯೋಗ – 400* ಬೆಳಗಾವಿ ಶುಗರ್ಸ್ ಪ್ರೈವೇಟ್, 240.84 ಕೋಟಿ ರೂ. ಹೂಡಿಕೆ, 170 ಉದ್ಯೋಗ* ಪರತ್ಪರ ಕಾಫಿ ಲಿಮಿಟೆಡ್, 236.8 ಕೋಟಿ ರೂ. ಹೂಡಿಕೆ, 200 ಉದ್ಯೋಗ* ಲಾಜಿಕಲಿ ಇನ್ಫೋಮೀಡಿಯಾ ಪ್ರೈವೇಟ್ ಲಿಮಿಟೆಡ್, 228.19 ಕೋಟಿ ರೂ. ಹೂಡಿಕೆ, 614 ಉದ್ಯೋಗ* ಎಎನ್‍ಎಸ್ ಪೇಪರ್ ಪ್ರೈವೇಟ್ ಲಿಮಿಟೆಡ್, 100 ಕೋಟಿ ರೂ. ಹೂಡಿಕೆ, 100 ಮಂದಿಗೆ ಉದ್ಯೋಗ* ಗೋದಾವತ್ ಪುಡ್ ಪ್ರೋ ಪ್ರೈವೇಟ್ ಲಿಮಿಟೆಡ್, 98.60 ಕೋಟಿ ರೂ. ಹೂಡಿಕೆ, ಉದ್ಯೋಗ – 30* ಜ್ಯೋತಿಸ್ನಾ ಲೈ-ಹೈಟೆಕ್ ಪ್ರೈವೇಟ್ ಲಿಮಿಟೆಡ್, 50 ಕೋಟಿ ರೂ. ಹೂಡಿಕೆ, ಜೊತೆಗೆ 220 ಉದ್ಯೋಗ
ಈ ಹಿಂದೆ ಸಚಿವ ಮುರುಗೇಶ್ ನಿರಾಣಿ ನೇತೃತ್ವದ ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ 2022ರ ಏಪ್ರಿಲ್ 30ರಂದು ನಡೆದ 131ನೇ ಸಭೆಯಲ್ಲಿ 8,575 ಜನರಿಗೆ ಉದ್ಯೋಗ ಅವಕಾಶದೊಂದಿಗೆ ರೂ 2,465.94 ಕೋಟಿ ಮೌಲ್ಯದ 60 ಕೈಗಾರಿಕಾ ಯೋಜನೆಗಳಿಗೆ ಅನುಮತಿ ನೀಡಿತ್ತು.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇವಿ ರಮಣರೆಡ್ಡಿ, ಕೈಗಾರಿಕಾ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎನ್ ಶಿವಶಂಕರ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಅಗ್ನಿಪಥದ ಅಗ್ನಿಕುಂಡದಲ್ಲಿ ಭಾರತ: ಬಿಹಾರದ ಡಿಸಿಎಂ ಮನೆ ಮೇಲೆ ದಾಳಿ, ಧಗಧಗನೇ ಹೊತ್ತಿ ಉರಿದ ರೈಲುಗಳು

ಟಾಯ್ಲೆಟ್​ ತೊಳೆಯುವುದಕ್ಕೂ ನಾನು ರೆಡಿ! ಬೀದಿಯಲ್ಲಿ ಸಾಬೂನು ಮಾರುವ ಸ್ಟಾರ್​ ನಟಿಯ ಕಣ್ಣೀರ ಕತೆಯಿದು

ಜ್ಯೋತಿಷಿ ಮಾತು ಕೇಳಿ ಕೆಟ್ಟ ಪ್ರೇಮಿಗಳು: ಮದ್ವೆಗೆ ಒಪ್ಪಿಗೆ ಸಿಕ್ಕರೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಪೇದೆ-ಅರಣ್ಯ ಅಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + eighteen =
Remember me
